ಸಾರಾಂಶ
ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 20ರಂದು ನಡೆಸಲಿದ್ದು, ಮಧ್ಯಂತರ ಆದೇಶ ಹೊರಡಿಸುವ ನಿರೀಕ್ಷೆಯಿದೆ.
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 20ರಂದು ನಡೆಸಲಿದ್ದು, ಮಧ್ಯಂತರ ಆದೇಶ ಹೊರಡಿಸುವ ನಿರೀಕ್ಷೆಯಿದೆ.
ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿದ ಆಸ್ತಿಗಳನ್ನು ಡಿನೋಟಿಫೈ ಮಾಡುವ ಅಧಿಕಾರ, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯ ಉಪಸ್ಥಿತಿ ಮತ್ತು ವಕ್ಫ್ ಆಸ್ತಿ ಸರ್ಕಾರಿ ಭೂಮಿಯಾಗಿರುವ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಿದಾಗ ಅದನ್ನು ವಕ್ಫ್ ಎಂದು ಪರಿಗಣಿಸಲಾಗುವುದಿಲ್ಲ ಎಂಬ ಅಂಶಗಳನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಮೇ 15ಂದು ಇದರ ವಿಚಾರಣೆಯನ್ನು ಮುಂದೂಡಿದ್ದ ಮುಖ್ಯ ನ್ಯಾ। ಬಿ.ಆರ್. ಗವಾಯಿ ಮತ್ತು ಆಗಸ್ಟಿನ್ ಅವರ ಪೀಠ, ಲಿಖಿತ ಟಿಪ್ಪಣಿಗಳನ್ನು ಸಲ್ಲಿಸುವಂತೆ ವಕೀಲರಿಗೆ ಸೂಚಿಸಿತ್ತು.