ಹಿಂಸಾಚಾರಕ್ಕೆ ಸಿಲುಕಿರುವ ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಸೇನಾಪಡೆಗೆ ಫ್ರೀ ಹ್ಯಾಂಡ್‌?

| Published : Nov 17 2024, 01:20 AM IST / Updated: Nov 17 2024, 05:09 AM IST

ಸಾರಾಂಶ

 ಹಿಂಸಾಚಾರಕ್ಕೆ ಸಿಲುಕಿರುವ ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯನ್ನು ಪುನಾಸ್ಥಾಪಿಸಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಭದ್ರತಾ ಪಡೆಗಳಿಗೂ ಕೇಂದ್ರ ಗೃಹ ಸಚಿವಾಲಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

 ನವದೆಹಲಿ : ಕಳೆದ ಕೆಲವು ದಿನಗಳಿಂದ ಮತ್ತೆ ಹಿಂಸಾಚಾರಕ್ಕೆ ಸಿಲುಕಿರುವ ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯನ್ನು ಪುನಾಸ್ಥಾಪಿಸಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಭದ್ರತಾ ಪಡೆಗಳಿಗೂ ಕೇಂದ್ರ ಗೃಹ ಸಚಿವಾಲಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

‘ಮಣಿಪುರದಲ್ಲಿನ ಭದ್ರತಾ ಪರಿಸ್ಥಿತಿ ಕೆಲವು ದಿನಗಳಿಂದ ದುರ್ಬಲವಾಗಿದೆ. ಸಶಸ್ತ್ರಧಾರಿ ದುಷ್ಕರ್ಮಿಗಳು ಹಿಂಸಾಚಾರದಲ್ಲಿ ತೊಡಗಿರುವುದರಿಂದ ಜೀವ ಹಾನಿಯಾಗಿ, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗಿದೆ. ಹಿಂಸಾಚಾರ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಮಹತ್ವದ ಪ್ರಕರಣಗಳನ್ನು ಎನ್‌ಐಎಗೆ ವಹಿಸಿ ಪರಿಣಾಮಕಾರಿ ತನಿಖೆ ನಡೆಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಮರುಸ್ಥಾಪನೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭದ್ರತಾ ಪಡೆಗಳಿಗೆ ಸೂಚಿಸಲಾಗಿದೆ‘ ಎಂದು ಗೃಹ ಸಚಿವಾಲಯ ತಿಳಿಸಿದೆ.

ಪೊಲೀಸ್‌ ಠಾಣೆ ಹಾಗೂ ಅದರ ಸನಿಹದಲ್ಲೇ ಇದ್ದ ಮಣಿಪುರದ ಜಿರಿಬಾಂನ ಸಿಆರ್‌ಪಿಎಫ್‌ ಶಿಬಿರದ ಮೇಲೆ ದಾಳಿ ನಡೆಸಲು ಯತ್ನಿಸಿದ 11 ಶಂಕಿತ ಉಗ್ರಗಾಮಿಗಳನ್ನು ಕಳೆದ ಸೋಮವಾರ ಭದ್ರತಾ ಪಡೆಗಳು ಗುಂಡಿನ ಚಕಮಕಿ ವೇಳೆ ಕೊಂದಿದ್ದವು. ಅದಾದ ಮರುದಿನವೇ ಆರು ಮಂದಿಯನ್ನು ಉಗ್ರರು ಅಪಹರಿಸಿದ್ದರು. ಅವರ ಶವಗಳು ಶನಿವಾರ ಪತ್ತೆ ಆಗಿವೆ. ಇದು ರಾಜ್ಯದಲ್ಲಿ ಮತ್ತಷ್ಟು ಹಿಂಸಾಚಾರಕ್ಕೆ ಕಾರಣವಾಗಿದೆ.

ಸುಮಾರು ಒಂದೂವರೆ ವರ್ಷದಿಂದ ಮಣಿಪುರದಲ್ಲಿ ಮೈತೇಯಿ-ಕುಕಿ ಜನಾಂಗಗಳ ನಡುವೆ ಜನಾಂಗೀಯ ಗಲಭೆ ನಡೆಯುತ್ತಿದ್ದು, ಸುಮಾರು 300 ಜನ ಮೃತರಾಗಿದ್ದಾರೆ.