ಸಾರಾಂಶ
ಹರ್ಯಾಣದ ಹಿರಿಯ ಪೊಲೀಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ತಮಗೆ ತಾವೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಚಂಡೀಗಢ: ಹರ್ಯಾಣದ ಹಿರಿಯ ಪೊಲೀಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ತಮಗೆ ತಾವೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 2001ನೇ ಬ್ಯಾಚ್‌ನ ಪೊಲೀಸ್ ಅಧಿಕಾರಿಯಾಗಿರುವ ಇವರು, ರೊಹ್ಟಕ್‌ನಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಐಜಿ ಆಗಿದ್ದರು. ‘ಮಂಗಳವಾರ ಮಧ್ಯಾಹ್ನ 1:30ರ ಸುಮಾರಿಗೆ ಪೂರಣ್‌ರ ನಿವಾಸದಲ್ಲಿ ಶವ ಪತ್ತೆಯಾಗಿರುವ ಮಾಹಿತಿ ದೊರಕಿದ್ದು, ಸೆಕ್ಟರ್ 11ರ ಠಾಣಾಧಿಕಾರಿಯವರ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತದೇಹವು ಪೂರಣ್‌ರದ್ದೇ ಎಂಬುದು ಧೃಡಪಟ್ಟಿದ್ದು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ವಿಧಿವಿಜ್ಞಾನ ತಂಡ ಸ್ಥಳದಲ್ಲಿ ತನಿಖೆ ನಡೆಸುತ್ತಿದೆ’ ಎಂದು ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.