ಯೋಧರಿಗಿನ್ನು ಉಚಿತ ಕಾನೂನು ಸೇವೆ

| Published : Jul 27 2025, 12:00 AM IST

ಸಾರಾಂಶ

ದೇಶಸೇವೆಗೆ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ, ಅವರ ಪರಿವಾರಗಳಿಗೆ ಉಚಿತವಾಗಿ ಕಾನೂನು ನೆರವನ್ನು ಕೊಡಲು ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ನಲ್ಸಾ)ವು ವೀರ ಪರಿವಾರ ಸಹಾಯತಾ ಯೋಜನೆ 2025 ಅಡಿಯಲ್ಲಿ ಹಾಲಿ ಮತ್ತು ನಿವೃತ್ತ ಯೋಧರಿಗೆ ಭೂವ್ಯಾಜ್ಯ, ಕೌಟುಂಬಿಕ ಕಲಹ ಮೊದಲಾದ ವಿಷಯಗಳಲ್ಲಿ ಉಚಿತ ಕಾನೂನು ಸೇವೆ ನೀಡಲಿದೆ.

ಕಾನೂನು ಹೋರಾಟದ ಸಮಸ್ಯೆಯಿಂದ ಮುಕ್ತಿ

ಸೇವೆ ವೇಳೆ ತವರಿಗೆ ಬರಲಾಗದವರಿಗೆ ನೆರವುಕಾನೂನು ಸೇವಾ ಪ್ರಾಧಿಕಾರದ ಮೂಲಕ ಸೇವೆ

ನ್ಯಾ. ಕಾಂತ್‌ ಕನಸಿನಂತೆ ನವೆಂಬರ್‌ನಲ್ಲಿ ಶುರು

ನವದೆಹಲಿ: ದೇಶಸೇವೆಗೆ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ, ಅವರ ಪರಿವಾರಗಳಿಗೆ ಉಚಿತವಾಗಿ ಕಾನೂನು ನೆರವನ್ನು ಕೊಡಲು ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ನಲ್ಸಾ)ವು ವೀರ ಪರಿವಾರ ಸಹಾಯತಾ ಯೋಜನೆ 2025 ಅಡಿಯಲ್ಲಿ ಹಾಲಿ ಮತ್ತು ನಿವೃತ್ತ ಯೋಧರಿಗೆ ಭೂವ್ಯಾಜ್ಯ, ಕೌಟುಂಬಿಕ ಕಲಹ ಮೊದಲಾದ ವಿಷಯಗಳಲ್ಲಿ ಉಚಿತ ಕಾನೂನು ಸೇವೆ ನೀಡಲಿದೆ.

ನ್ಯಾ.ಕಾಂತ್‌ ಕನಸು:

ಪಾಕಿಸ್ತಾನ ವಿರುದ್ಧದ ಆಪರೇಷನ್‌ ಸಿಂದೂರದ ವೇಳೆ ಭಾರತೀಯ ಸೈನಿಕರು ತೋರಿದ ಶೌರ್ಯ ಸಾಹಸ, ಬಲಿದಾನಗಳಿಂದ ಪ್ರಭಾವಿತರಾದ, ನಾಲ್ಸಾದ ಕಾರ್ಯಾಧ್ಯಕ್ಷರೂ ಆದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ನ್ಯಾ। ಸೂರ್ಯಕಾಂತ್‌ ಅವರು, ಯೋಧರ ಪರಿವಾರಗಳಿಗೆ ನೆರವಾಗಲು ಈ ಯೋಜನೆಯ ಯೋಚನೆ ಮಾಡಿದ್ದರು. ಈ ಮೂಲಕ, ದೇಶ ಕಾಯುವ ಯೋಧರ ಕೈಹಿಡಿಯಲು ನ್ಯಾಯಾಂಗವು ಮುಂದಾಗಬೇಕು ಎಂಬುದು ಇದರ ಉದ್ದೇಶವಾಗಿತ್ತು. ಈ ಯೋಜನೆಯನ್ನು, 2025ರ ನ.24ರಂದು ನ್ಯಾ। ಕಾಂತ್‌ ಅವರು ಮುಖ್ಯ ನ್ಯಾಯಮೂರ್ತಿಯ ಹುದ್ದೆಗೆ ಏರುವ ಮುನ್ನ ಜಾರಿಗೆ ತರಲಾಗುವುದು.

ಉಪಯೋಗವೇನು?:

ವರ್ಷದಲ್ಲಿ ಹಲವು ತಿಂಗಳು ಮನೆಯಿಂದ ದೂರವಿರುವ ಸೈನಿಕರು, ಭೂಮಿ, ಆಸ್ತಿ, ಕೌಟುಂಬಿಕ ಬಿಕ್ಕಟ್ಟುಗಳಂತಹ ಸಮಸ್ಯೆಗಳು ಕಾನೂನು ಪ್ರಕ್ರಿಯೆಗಳಿಗೆ ಒಳಗಾಗಿದ್ದರೆ, ಬೇಕೆಂದಾಗ ಊರಿಗೆ ಮರಳಲಾಗುವುದಿಲ್ಲ. ಕೆಲವು ಪ್ರಕರಣಗಳಲ್ಲಿ ಯೋಧರ ಕುಟುಂಬಕ್ಕೆ ಸೂಕ್ತ ರೀತಿಯ ಕಾನೂನು ನೆರವು ಸಿಕ್ಕಿರುವುದಿಲ್ಲ. ಹೀಗಿರುವಾಗ, ಅಂಥವರ ಅನುಕೂಲಕ್ಕಾಗಿ ನಾಲ್ಸಾ ಅವರ ನೆರವಿಗೆ ಬಂದು, ಸುಗಮ ಪ್ರಕ್ರಿಯೆಗೆ ಸಹಕಾರಿಯಾಗುತ್ತದೆ.

ಈ ಸೌಲಭ್ಯವು ಬಿಎಸ್‌ಎಫ್‌, ಸಿಆರ್‌ಪಿಎಫ್‌, ಐಟಿಬಿಪಿ ಸೇರಿದಂತೆ ಅರೆಸೇನಾಪಡೆಗಳಲ್ಲಿರುವವರಿಗೂ ಲಭಿಸುತ್ತದೆ.