ಸಾರಾಂಶ
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಮರುಪರಿಶೀಲಿಸುವಂತೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದತಿ ನಿರ್ಧಾರ ಸರಿ ಇದೆ ಎಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲನೆಗೆ ಅರ್ಜಿಗಳು ಸಲ್ಲಿಕೆಯಾಗಿದೆ.
ಈ ಅರ್ಜಿಯನ್ನು ಜಮ್ಮು ಕಾಶ್ಮೀರ ಹೈಕೋರ್ಟಿನ ಬಾರ್ ಅಸೋಸಿಯೇಷನ್, ಆವಾಮಿ ನ್ಯಾಷನಲ್ ಕಾನ್ಫರೆನ್ಸ್, ಜಮ್ಮು ಕಾಶ್ಮೀರ ಪೀಪಲ್ಸ್ ಮೂಮೆಂಟ್ ಹಾಗೂ ಮುಜಾಫರ್ ಇಕ್ಬಾಲ್ ಖಾನ್ ಎಂಬುವರು ಸಲ್ಲಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಆವಾಮಿ ನ್ಯಾಷನಲ್ ಕಾನ್ಫರೆನ್ಸ್‌ನ ಮುಜಾಫರ್ ಶಾ,‘ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ವಿಧಿ ರದ್ದತಿ ಸರಿ ಇದೆ ಎಂದು ಹೇಳಿದ್ದ ಸುಪ್ರೀಂ ಕೋರ್ಟಿನ ತೀರ್ಪಿನ್ನು ಮರುಪರಿಶೀಲನೆ ನಡೆಸುವಂತೆ ಸಲ್ಲಿಸಿದ್ದೇವೆ’ ಎಂದರು.