ಸಾರಾಂಶ
ಕೋಲ್ಕತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಗಾಯಕಿ ಶ್ರೇಯಾ ಘೋಷಾಲ್ ಅವರು ಸೆಪ್ಟೆಂಬರ್ 14 ರಂದು ನಡೆಯಬೇಕಿದ್ದ ತಮ್ಮ ಸಂಗೀತ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಕೋಲ್ಕತಾ: ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಅವರು ಕೋಲ್ಕತಾದಲ್ಲಿ ಸೆ.14ರಂದು ನಿಗದಿಯಾಗಿದ್ದ ತಮ್ಮ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಿ ದಿನಾಂಕ ಮುಂದೂಡುವುದಾಗಿ ತಿಳಿಸಿದ್ದಾರೆ. ಕೋಲ್ಕತಾದಲ್ಲಿನ ವೈದ್ಯೆ ಅತ್ಯಾಚಾರ ಮತ್ತು ಆಕೆಯ ಕೊಲೆ ಘಟನೆಯಿಂದಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
‘ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮನಸ್ಸಿಗೆ ಅತೀವ ನೋವು ತಂದಿದೆ. ಹೀಗಾಗಿ ಸೆ.14ರಂದು ನಿಗದಿಯಾಗಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ, ಅಕ್ಟೋಬರ್‌ನಲ್ಲಿ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ. ಮಹಿಳೆಯರ ಮೇಲಿನ ಭದ್ರತೆಗೆ ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕಿದೆ’ ಎಂದು ಶ್ರೇಯಾ ಟ್ವೀಟ್ ಮಾಡಿದ್ದಾರೆ.