ನಾಳೆ ಭೂಮಿಯತ್ತ ಶುಕ್ಲಾ ಪ್ರಯಾಣ ಆರಂಭ

| N/A | Published : Jul 13 2025, 01:18 AM IST / Updated: Jul 13 2025, 04:40 AM IST

ಸಾರಾಂಶ

ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭೂಮಿಗೆ ಬರುವ ದಿನ ಸನ್ನಿಹಿತವಾಗಿದ್ದು, ಜು.14ಕ್ಕೆ ಮುಹೂರ್ತ ನಿಗದಿಯಾಗಿದೆ.

 

ನವದೆಹಲಿ: ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಭೂಮಿಗೆ ಬರುವ ದಿನ ಸನ್ನಿಹಿತವಾಗಿದ್ದು, ಜು.14ಕ್ಕೆ ಮುಹೂರ್ತ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಜು.14ರ ಸಂಜೆ 4:35ಕ್ಕೆ ಐಎಸ್‌ಎಸ್‌ನಿಂದ ಹೊರಟು, ಜು.15ರಂದು ಮಧ್ಯಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ ಕಡಲತೀರಕ್ಕೆ ಬಂದಿಳಿಯಲಿದ್ದಾರೆ.

ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳಾದ ಪೆಗ್ಗಿ ವಿಟ್ಸನ್, ಸ್ಲಾವೊಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಟಿಬೋರ್ ಕಾಪು ಜೂ.26ರಂದು ಆಕ್ಸಿಯೋಂ-4 ಕಾರ್ಯಾಚರಣೆಯ ಭಾಗವಾಗಿ ಐಎಸ್‌ಎಸ್‌ಗೆ ತೆರಳಿದ್ದರು.

7 ದಿನ ಪುನಶ್ಚೈತನ್ಯ ಕಾರ್ಯಕ್ರಮ

ಗಗನಯಾತ್ರಿಗಳು ಭೂಮಿಗೆ ಮರಳಿದ ಬಳಿಕ ಇಲ್ಲಿನ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಬೇಕಾಗುತ್ತದೆ. ಹಾಗಾಗಿ 7 ದಿನಗಳ ಕಾಲ ತಜ್ಞ ವೈದ್ಯರ ಮೂಲಕ ಪುನಶ್ಚೈತನ್ಯ ಕಾರ್ಯಕ್ರಮ ನಡೆಸಿ, ಭೂಮಿಯ ವಾತಾವರಣಕ್ಕೆ ಅವರ ದೇಹಸ್ಥಿತಿ ಹೊಂದಿಕೊಳ್ಳುವಂತೆ ಮಾಡಲಾಗುತ್ತದೆ ಎಂದು ಇಸ್ರೋ ತಿಳಿಸಿದೆ.

  • ಐಎಸ್‌ಎಸ್‌ನಲ್ಲಿ ಆಕ್ಸಿಯೋಂ-4 ಕಾರ್ಯಾಚರಣೆ ಪೂರ್ಣ
  • ಜು.15ಕ್ಕೆ ಸಮುದ್ರಕ್ಕೆ ಬಂದು ಬೀಳಲಿರುವ ನೌಕೆ
  •   ಪೆಗ್ಗಿ ವಿಟ್ಸನ್, ಸ್ಲಾವೊಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಟಿಬೋರ್ ಕಾಪು ಐಎಸ್‌ಎಸ್‌ಗೆ
  • ಗಗನಯಾತ್ರಿಗಳು ಭೂಮಿಗೆ ಮರಳಿದ ಬಳಿಕ ಇಲ್ಲಿನ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಬೇಕಾಗುತ್ತದೆ 

Read more Articles on