ಸಾರಾಂಶ
: ಆಸ್ಪತ್ರೆಯಲ್ಲಿ ಕರ್ತವ್ಯದ ಸಮಯದಲ್ಲಿ ಮಂಗಗಳ ಜೊತೆ ಆಟವಾಡುತ್ತಾ ರೀಲ್ಸ್ ಮಾಡುತ್ತಿದ್ದ 6 ದಾದಿಯರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ.
ಬಹ್ರೈಚ್(ಯುಪಿ): ಆಸ್ಪತ್ರೆಯಲ್ಲಿ ಕರ್ತವ್ಯದ ಸಮಯದಲ್ಲಿ ಮಂಗಗಳ ಜೊತೆ ಆಟವಾಡುತ್ತಾ ರೀಲ್ಸ್ ಮಾಡುತ್ತಿದ್ದ 6 ದಾದಿಯರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ದಾದಿಯರ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ. ಬಹ್ರೈಚ್‌ನ ಸರ್ಕಾರಿ ಮಹಿಳಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಪ್ರಸೂತಿ ವಿಭಾಗಕ್ಕೆ ನಿಯೋಜಿತ ನರ್ಸ್‌ಗಳು ಸಮವಸ್ತ್ರ ಧರಿಸಿಕೊಂಡು ಮಂಗನ ಮರಿ ಜೊತೆ ಆಡುತ್ತಿದ್ದ ವಿಡಿಯೋ ವೈರಲ್ ಆದ ಬಳಿಕ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡುವ ಜೊತೆಗೆ ತನಿಖೆಗಾಗಿ ಐದು ವೈದ್ಯರ ಸಮಿತಿಯನ್ನು ರಚಿಸಲಾಗಿದೆ.
ಪೂಜಾ ಸಾಮಗ್ರಿ ಮಾರಾಟ ಮಾಡದಂತೆ ಮುಸ್ಲಿಮರಿಗೆ ನಿಷೇಧಕ್ಕೆ ವಿಎಚ್‌ಪಿ ಆಗ್ರಹನವದೆಹಲಿ: ಮುಸ್ಲಿಮರು ತಮ್ಮ ಗುರುತನ್ನು ಮರೆಮಾಚಿಕೊಂಡು ಹಿಂದೂಗಳ ಧಾರ್ಮಿಕ ಸ್ಥಳಗಳಲ್ಲಿ ಪೂಜಾ ಸಾಮಗ್ರಿಗಳನ್ನು ಮಾರುವುದರಿಂದ ಹಿಂದೂಗಳ ನಂಬಿಕೆಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿರುವ ವಿಶ್ವ ಹಿಂದೂ ಪರಿಷತ್ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಆಗ್ರಹಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಪರಿಷತ್ ಪ್ರಧಾನ ಕಾರ್ಯದರ್ಶಿ ಬಜರಂಗ್ ಬಾಗ್ರಾ, ‘ಕೇದಾರನಾಥದಂತಹ ಹಿಂದೂಗಳ ಯಾತ್ರಾ ಸ್ಥಳಗಳಲ್ಲಿ ಮುಸ್ಲಿಮರು ಪ್ರಸಾದ ಹಾಗೂ ಇರತೆ ಪೂಜಾ ಸಾಮಗ್ರಿಗಳನ್ನು ಮಾರುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಕಾನೂನಿನ ಪ್ರಕಾರ ಇದಕ್ಕೆ ಯಾವುದೇ ಆಕ್ಷೇಪಣೆ ಇಲ್ಲವಾದರೂ ಕೆಲ ಕಡೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ಪಾನೀಯ ಹಾಗು ತಿನಿಸುಗಳಲ್ಲಿ ಉಗುಳುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.