ಇಮ್ರಾನ್‌ ಪರ ಹಿಂಸಾತ್ಮಕ ಪ್ರತಿಭಟನೆಗೆ 6 ಸೈನಿಕರು ಬಲಿ: ಪಾಕಲ್ಲಿ ಕಂಡಲ್ಲಿ ಗುಂಡು ಆದೇಶ

| Published : Nov 27 2024, 01:00 AM IST

ಇಮ್ರಾನ್‌ ಪರ ಹಿಂಸಾತ್ಮಕ ಪ್ರತಿಭಟನೆಗೆ 6 ಸೈನಿಕರು ಬಲಿ: ಪಾಕಲ್ಲಿ ಕಂಡಲ್ಲಿ ಗುಂಡು ಆದೇಶ
Share this Article
  • FB
  • TW
  • Linkdin
  • Email

ಸಾರಾಂಶ

ಸೆರೆಯಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಿಡುಗಡೆಗೆ ಆಗ್ರಹಿಸಿ ಅವರ ಬೆಂಬಲಿಗರು ಭಾನುವಾರದಿಂದ ಆರಂಭಿಸಿರುವ ಪ್ರತಿಭಟನೆ ಸೋಮವಾರ ಹಿಂಸಾತ್ಮಕ ರೂಪ ಪಡೆದಿದೆ.

ಇಸ್ಲಾಮಾಬಾದ್‌: ಸೆರೆಯಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಿಡುಗಡೆಗೆ ಆಗ್ರಹಿಸಿ ಅವರ ಬೆಂಬಲಿಗರು ಭಾನುವಾರದಿಂದ ಆರಂಭಿಸಿರುವ ಪ್ರತಿಭಟನೆ ಸೋಮವಾರ ಹಿಂಸಾತ್ಮಕ ರೂಪ ಪಡೆದಿದೆ. ಪ್ರತಿಭಟನಾಕಾರರ ದಾಳಿಗೆ 6 ಯೋಧರು ಬಲಿಯಾಗಿದ್ದು, ನೂರಾರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಮ್ರಾನ್‌ನ ತೆಹ್ರೀಕ್‌ ಎ ಇನ್ಸಾಪ್‌ ಪಕ್ಷದ ಸಾವಿರಾರು ಕಾರ್ಯಕರ್ತರು ಸರ್ಕಾರದ ನಿಷೇಧಾಜ್ಞೆ ಉಲ್ಲಂಘಿಸಿ ರಾಜಧಾನಿ ಇಸ್ಲಾಮಾಬಾದ್‌ಗೆ ನುಗ್ಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹತ್ತಿಕ್ಕುವ ನಿಟ್ಟಿನಲ್ಲಿ ಸರ್ಕಾರ ಕಂಡಲ್ಲಿ ಗುಂಡಿಕ್ಕುವ ಆದೇಶ ಹೊರಡಿಸಿದೆ.

ಈ ನಡುವೆ ಯೋಧರ ಹತ್ಯೆ ಹಿನ್ನೆಲೆಯಲ್ಲಿ ಇಮ್ರಾನ್ ಮತ್ತು ಅವರ ಪಕ್ಷದ ಹಲವು ನಾಯಕರ ವಿರುದ್ಧ ಪೊಲೀಸರು ಭಯೋತ್ಪಾದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಇಮ್ರಾನ್‌ ವಿರುದ್ಧ 20ಕ್ಕೂ ಹೆಚ್ಚು ಕೇಸು ದಾಖಲಾಗಿದೆ.

ಈ ನಡುವೆ ಹಿಂಸಾತ್ಮಕ ಪ್ರತಿಭಟನೆ ಖಂಡಿಸಿರುವ ಪ್ರಧಾನಿ ಶೆಹಬಾಜ್‌ ಶರೀಫ್‌, ‘ಶಾಂತಿಯುತ ಪ್ರತಿಭಟನೆ ಹೆಸರಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ದಾಳಿ ನಡೆಸುವುದು ಖಂಡನಾರ್ಹ. ಅಶಾಂತಿ ಸೃಷ್ಟಿಸುತ್ತಿರುವವರನ್ನು ಗುರುತಿಸಿ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಆದೇಶಿಸಿದ್ದಾರೆ.