ಸಾರಾಂಶ
ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೊನೆಗೂ ತಾವು ಪ್ರತಿನಿಧಿಸುವ ಉತ್ತರಪ್ರದೇಶದ ಅಮೇಠಿ ಕ್ಷೇತ್ರದ ಮತದಾರೆಯಾಗಿ ಹೊರಹೊಮ್ಮಿದ್ದಾರೆ.
ಅಮೇಠಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೊನೆಗೂ ತಾವು ಪ್ರತಿನಿಧಿಸುವ ಉತ್ತರಪ್ರದೇಶದ ಅಮೇಠಿ ಕ್ಷೇತ್ರದ ಮತದಾರೆಯಾಗಿ ಹೊರಹೊಮ್ಮಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅಮೇಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಗೆಲುವು ಸಾಧಿಸಿದ್ದರಾದರೂ ಆಗ ಅವರು ಅಲ್ಲಿಯ ಮತದಾರರಾಗಿರಲಿಲ್ಲ. ಚುನಾವಣೆ ಬಳಿಕ ಅವರು ನಾನು ಮುಂದಿನ ದಿನಗಳಲ್ಲಿ ಇಲ್ಲಿಯೇ ಮನೆ ನಿರ್ಮಿಸುತ್ತೇನೆ. ಇಲ್ಲಿಯ ಮತದಾರೆ ಆಗುವೆ ಎಂದು ಮತದಾರರಿಗೆ ಭರವಸೆ ನೀಡಿದ್ದರು.
ಅದರಂತೆ ಇತ್ತೀಚೆಗೆ ಹೊಸ ಮನೆ ಗೃಹ ಪ್ರವೇಶ ಮಾಡಿದ್ದ ಸ್ಮೃತಿ ಇದೀಗ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಪ್ರಕ್ರಿಯೆ ಪೂರ್ಣಗೊಳಿಸಿ, ಗೌರಿಗಂಜ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೇದನ್ ಮವಾಯ್ ಗ್ರಾಮದ ಮತಗಟ್ಟೆ ನಂ.347ರ ಮತದಾರೆಯಾಗಿ ಹೊರಹೊಮ್ಮಿದ್ದಾರೆ.