ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಮಂಗಳವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿ ಮಾಲಿನ್ಯದಿಂದಾಗಿ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸ
ನವದೆಹಲಿ: ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಮಂಗಳವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ದೀರ್ಘಕಾಲದ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದು, ತಪಾಸಣೆಗೆ ಆಗಾಗ ಆಸ್ಪತ್ರೆಗೆ ತೆರಳುತ್ತಿದ್ದರು. ಈ ನಡುವೆ ದೆಹಲಿ ಮಾಲಿನ್ಯದಿಂದಾಗಿ ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ನಿಗಾವಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಹರ್ಯಾಣ ಡ್ರಗ್ಸ್‌ಮಯ : ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಆರೋಪ
ಚಂಡೀಗಢ: ಹರ್ಯಾಣ ರಾಜ್ಯಾದ್ಯಂತ ಡ್ರಗ್ಸ್ ದಂಧೆ ವ್ಯಾಪಕವಾಗಿ ಹರಡಿದ್ದು, ಯುವಜನತೆಯನ್ನು ಬಲಿಪಡೆದುಕೊಳ್ಳುತ್ತಿದೆ. ಹಳ್ಳಿ, ಪಟ್ಟಣ ಮತ್ತು ಪ್ರತಿ ಜನವಸತಿ ಪ್ರದೇಶವನ್ನು ತಲುಪಿ, ಅತಿ ದೊಡ್ಡ ಸಾಮಾಜಿಕ ಸಮಸ್ಯೆಯಾಗಿ ಮಾರ್ಪಟ್ಟಿದೆ. ಇದಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವೇ ಜವಾಬ್ದಾರ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹಾಗೂ ಹರ್ಯಾಣ ಮೂಲದ ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.
ಪ್ರಮುಖ ಸಾಮಾಜಿಕ ಸಮಸ್ಯೆ
ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ‘ಮಾದಕ ವಸ್ತುಗಳು ಹಳ್ಳಿಗಳು, ಪಟ್ಟಣಗಳು ಮತ್ತು ವಸತಿ ಪ್ರದೇಶಗಳನ್ನು ತಲುಪಿದ್ದು, ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯಾಗಿ ಮಾರ್ಪಟ್ಟಿದೆ. ಪರಿಸ್ಥಿತಿ ಎಷ್ಟು ಗಂಭೀರವಾಗಿದೆಯೆಂದರೆ, ಹಳ್ಳಿಗಳಲ್ಲಿ ವೃದ್ಧರು ಡ್ರಗ್ಸ್‌ನಿಂದ ಸಾವನ್ನಪ್ಪಿದ ಯುವಕರ ಹೆಸರುಗಳನ್ನು ಬರೆದಿಟ್ಟುಕೊಳ್ಳುವಂತೆ ಮಾಡಿದೆ. ಈ ಸಾವಿನ ಸಂಖ್ಯೆಗಳು ಬರೀ ಸಂಖ್ಯೆಗಳಲ್ಲ, ಮುರಿದ ಕುಟುಂಬಗಳು ಮತ್ತು ಛದ್ರವಾದ ಭವಿಷ್ಯದ ಸಂಕೇತ. ಸರ್ಕಾರದ ಡ್ರಗ್ಸ್ ವಿರೋಧಿ ಅಭಿಯಾನಗಳು ಕಾಗದಪತ್ರಗಳು ಮತ್ತು ಪ್ರಚಾರಕ್ಕೆ ಸೀಮಿತವಾಗಿವೆ. ಸರ್ಕಾರದ ನಿರ್ಲಕ್ಷ್ಯವೇ ಇದಕ್ಕೆ ಕಾರಣ’ ಎಂದು ಆರೋಪಿಸಿದ್ದಾರೆ.
