ಇಂದು ರಾಜ್ಯಸಭೆಗೆ ಸೋನಿಯಾ ನಾಮಪತ್ರ?

| Published : Feb 14 2024, 02:22 AM IST / Updated: Feb 14 2024, 07:40 AM IST

Sonia Gandhi

ಸಾರಾಂಶ

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದಾಗ್ಯೂ ಸೋನಿಯಾ ರಾಜಸ್ಥಾನದಿಂದಲೇ ನಾಮಪತ್ರ ಸಲ್ಲಿಸಲಿದ್ದಾರಾ ಎಂಬುದು ಇನ್ನೂ ಖಚಿತವಾಗಿಲ್ಲ.

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಇದೇ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಬುಧವಾರ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದಾಗ್ಯೂ ಸೋನಿಯಾ ರಾಜಸ್ಥಾನದಿಂದಲೇ ನಾಮಪತ್ರ ಸಲ್ಲಿಸಲಿದ್ದಾರಾ ಎಂಬುದು ಇನ್ನೂ ಖಚಿತವಾಗಿಲ್ಲ. ರಾಜ್ಯಸಭೆ ಪ್ರವೇಶಕ್ಕೆ ಸೋನಿಯಾ ಹಿಮಾಚಲ ಪ್ರದೇಶ ಅಥವಾ ರಾಜಸ್ಥಾನವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು. 

ನಾಮಪತ್ರ ಸಲ್ಲಿಕೆ ವೇಳೆ ಸೋನಿಯಾಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಾಥ್‌ ನೀಡಲಿದ್ದಾರೆ.

77ರ ಹರೆಯದ ಸೋನಿಯಾ ಗಾಂಧಿ ಹಾಲಿ ಉತ್ತರ ಪ್ರದೇಶದ ರಾಯ್‌ ಬರೇಲಿ ಸಂಸದೆ. ಆದರೆ ವಯಸ್ಸಿನ ಕಾರಣ ಈ ಲೋಕಸಭೆ ಚುನಾವಣೆಗೆ ಸ್ಪರ್ಧಿಸದೇ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.