ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕದ ಅಧಿಕೃತ ಬಿಡುಗಡೆ ಸಮಾರಂಭವು ಸೋಮವಾರ ನವದೆಹಲಿಯಲ್ಲಿ ನಡೆಯಲಿದೆ.

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕದ ಅಧಿಕೃತ ಬಿಡುಗಡೆ ಸಮಾರಂಭವು ಸೋಮವಾರ ನವದೆಹಲಿಯಲ್ಲಿ ನಡೆಯಲಿದೆ.

ಅಧಿಕೃತ ಬಿಡುಗಡೆ ಸಮಾರಂಭ ನಡೆದಿರಲಿಲ್ಲ

ಈ ಪುಸ್ತಕವು ನವೆಂಬರ್ 10 ರಂದೇ ಮಾರುಕಟ್ಟೆಗೆ ಬಿಡುಗಡೆಯಾಗಿದ್ದರೂ ಅಧಿಕೃತ ಬಿಡುಗಡೆ ಸಮಾರಂಭ ನಡೆದಿರಲಿಲ್ಲ. ಹೀಗಾಗಿ ಸೋಮವಾರ ಔಪಚಾರಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಾರಂಭವು ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಸಂಜೆ 5.30ಕ್ಕೆ ನಡೆಯಲಿದೆ

ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಲಿದ್ದಾರೆ. ಇದರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರು ಹಾಗೂ ಆಯ್ದ ಗಣ್ಯರಿಗೆ ವಿಶೇಷ ಆಹ್ವಾನ ನೀಡಲಾಗಿದೆ.

ಆಯ್ದ ಗಣ್ಯರಿಗೆ ವಿಶೇಷ ಆಹ್ವಾನ

ಆದರೆ, ಇದು ಸಾರ್ವಜನಿಕ ಕಾರ್ಯಕ್ರಮವಲ್ಲ. ಗಾಂಧಿ ಕುಟುಂಬ ಮತ್ತು ಪ್ರಕಾಶಕರಿಂದ ವೈಯಕ್ತಿಕ ಆಹ್ವಾನ ಪಡೆದವರಿಗೆ ಮಾತ್ರ ಪ್ರವೇಶವಿರಲಿದೆ ಎಂದು ಮೂಲಗಳು ಹೇಳಿವೆ.