ಸಾರಾಂಶ
ಕಾಂಗ್ರೆಸ್ ನಾಯಕಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು 2,000 ಕೋಟಿ ರು. ಮೌಲ್ಯದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ ಆಸ್ತಿಯನ್ನು ಕಬಳಿಸಲು ಬಯಸಿದ್ದರು ಎಂದು ಜಾರಿ ನಿರ್ದೇಶನಾಲಯ ಬುಧವಾರ ಆರೋಪಿಸಿದೆ.
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರು 2,000 ಕೋಟಿ ರು. ಮೌಲ್ಯದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ ಆಸ್ತಿಯನ್ನು ಕಬಳಿಸಲು ಬಯಸಿದ್ದರು ಎಂದು ಜಾರಿ ನಿರ್ದೇಶನಾಲಯ ಬುಧವಾರ ಆರೋಪಿಸಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಪರಭಾರೆ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರ ಮುಂದೆ ಇ.ಡಿ. ಈ ವಾದ ಮಂಡಿಸಿದೆ. ಈಗಾಗಲೇ ಸೋನಿಯಾ ಹಾಗೂ ರಾಹುಲ್ ವಿರುದ್ಧ ಅದು ದೋಷಾರೋಪ ದಾಖಲಿಸಿದೆ.