ಸಾರಾಂಶ
ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಭೂತಾನಾದ್ಯಂತ ಸರ್ಕಾರಿ ಕಚೇರಿಗಳು ಮತ್ತು ವಿದೇಶಗಳಲ್ಲಿನ ರಾಯಭಾರ ಕಚೇರಿಗಳಲ್ಲಿ ಆ ದೇಶದ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸುವ ಮೂಲಕ ಸಂತಾಪ ಸೂಚಿಸಲಾಯಿತು.
ನವದೆಹಲಿ: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಭೂತಾನಾದ್ಯಂತ ಸರ್ಕಾರಿ ಕಚೇರಿಗಳು ಮತ್ತು ವಿದೇಶಗಳಲ್ಲಿನ ರಾಯಭಾರ ಕಚೇರಿಗಳಲ್ಲಿ ಆ ದೇಶದ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸುವ ಮೂಲಕ ಸಂತಾಪ ಸೂಚಿಸಲಾಯಿತು. ಜೊತೆಗೆ ಭೂತಾನಾದ್ಯಂತ ಪ್ರಾರ್ಥನಾ ಸಭೆಗಳನ್ನು ನಡೆಸಲಾಯಿತು. ಈ ನಡುವೆ ಭೂತಾನ್ ರಾಜ ದೆಹಲಿಯಲ್ಲಿ ನಡೆದ ಸಿಂಗ್ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು.
ಮಾರಿಷಸ್‌ನಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಗೌರವ
ನವದೆಹಲಿ: ಮಾರಿಷಸ್ ಸರ್ಕಾರ ತನ್ನ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದೆ. ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದಾಗಿ, ಅವರ ಅಂತ್ಯಕ್ರಿಯೆ ದಿನವಾದ ಶನಿವಾರ ಸೂರ್ಯಾಸ್ತದವರೆಗೆ ರಾಷ್ಟ್ರಧ್ವಜವನ್ನು ಎಲ್ಲ ಸರ್ಕಾರಿ ಕಚೇರಿಯಲ್ಲಿಯೂ ಅರ್ಧಕ್ಕೆ ಹಾರಿಸಬೇಕು’ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿತ್ತು.