ಸಾರಾಂಶ
ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಕ್ರೀಡಾ ಕ್ಷೇತ್ರಕ್ಕೆ ಒಟ್ಟಾರೆ 3794 ಕೋಟಿ ರು. ಮೀಸಲಿಡುವುದಾಗಿ ವಿತ್ತ ಸಚಿವೆ ನಿರ್ಮಲಾ ತಿಳಿಸಿದರು.
ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಕ್ರೀಡಾ ಕ್ಷೇತ್ರಕ್ಕೆ ಒಟ್ಟಾರೆ 3794 ಕೋಟಿ ರು. ಮೀಸಲಿಡುವುದಾಗಿ ವಿತ್ತ ಸಚಿವೆ ನಿರ್ಮಲಾ ತಿಳಿಸಿದರು. ಬಜೆಟ್ ಭಾಷಣದಲ್ಲಿ ವಿವರಗಳನ್ನು ನೀಡಿದ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ 1000 ಕೋಟಿ ರು. ನೀಡುವುದಾಗಿ ತಿಳಿಸಿದರು. ಕಳೆದ ವರ್ಷ ಖೇಲೋ ಇಂಡಿಯಾಗೆ 800 ಕೋಟಿ ರು.ಗಳ ಅನುದಾನ ನೀಡಲಾಗಿತ್ತು. ಈ ಬಾರಿ 200 ಕೋಟಿ ರು. ಹೆಚ್ಚಳ ಮಾಡಲಾಗಿದೆ.
ಇನ್ನು, 2024-25ರ ಸಾಲಿಗೆ ಹೋಲಿಸಿದರೆ ಈ ವರ್ಷ ಒಟ್ಟಾರೆ 351.98 ಕೋಟಿ ರು. ಹೆಚ್ಚುವರಿ ಅನುದಾನ ಘೋಷಣೆಯಾಗಿದೆ.
ಈ ವರ್ಷ ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್‌ನಂಥ ಯಾವುದೇ ಪ್ರಮುಖ ಕ್ರೀಡಾಕೂಟಗಳು ಇಲ್ಲದಿದ್ದರೂ, ಹೆಚ್ಚುವರಿ ಅನುದಾನ ಘೋಷಿಸಲಾಗಿದೆ.
ಇನ್ನು, ರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳಿಗೆ ನೀಡುವ ಆರ್ಥಿಕ ನೆರವನ್ನೂ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಕಳೆದ ವರ್ಷ ಇದ್ದ 340 ಕೋಟಿ ರು. ಆರ್ಥಿಕ ನೆರವನ್ನು ಈ ಬಾರಿ 400 ಕೋಟಿ ರು.ಗೆ ಹೆಚ್ಚಿಸಲಾಗಿದೆ.