ಸಾರಾಂಶ
ಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಈ ನಡುವೆ ವಿಸ್ತಾರ ವಿಮಾನದಲ್ಲಿ ಬಾಂಬ್ ಇದೆ ಎಂದು ಶ್ರೀನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದ್ದು, 1 ಗಂಟೆ ಏರ್‌ಪೋರ್ಟ್ ಕಾರ್ಯಾಚರಣೆ ಸ್ಥಗಿತಗೊಂಡ ಘಟನೆ ಶುಕ್ರವಾರ ನಡೆದಿದೆ.
ಶ್ರೀನಗರ: ಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಈ ನಡುವೆ ವಿಸ್ತಾರ ವಿಮಾನದಲ್ಲಿ ಬಾಂಬ್ ಇದೆ ಎಂದು ಶ್ರೀನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದ್ದು, 1 ಗಂಟೆ ಏರ್‌ಪೋರ್ಟ್ ಕಾರ್ಯಾಚರಣೆ ಸ್ಥಗಿತಗೊಂಡ ಘಟನೆ ಶುಕ್ರವಾರ ನಡೆದಿದೆ. ತಪಾಸಣೆ ಬಳಿಕ ಅದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿದೆ.
ನವದೆಹಲಿಯಿಂದ ಶ್ರೀನಗರಕ್ಕೆ ಬಂದ ಹಾಗೂ 178 ಜನರಿದ್ದ ವಿಸ್ತಾರ ಏರ್‌ಲೈನ್ಸ್ ವಿಮಾನದಲ್ಲಿ ಬಾಂಬ್ ಇರಿಸಿರುವುದಾಗಿ ಶ್ರೀನಗರ ವಿಮಾನ ನಿಲ್ದಾಣ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಕರೆ ಬಂದಿದೆ.
ಇದು ಆತಂಕಕ್ಕೆ ಕಾರಣವಾಗಿತ್ತು. ವಿಮಾನ ಶ್ರೀನಗರ ವಿಮಾನ ನಿಲ್ದಾಣ ತಲುಪುತ್ತಿದ್ದಂತೆ, ಪ್ರಯಾಣಿಕರನ್ನು ಕೆಳಗಿಳಿಸಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ಮಾಡಲಾಯಿತು. ಆದರೆ ಶೋಧದ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಸುಮಾರು ಒಂದು ಗಂಟೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಪುನಾರಂಭವಾಯಿತು.