ಸಾರಾಂಶ
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಮಾಣ ಸ್ವೀಕರಿಸಿದ ಸಮಾರಂಭದಲ್ಲಿ ಬಾಲಿವುಡ್ ನಟರಾದ ಶಾರೂಖ್ ಖಾನ್, ಅಕ್ಷಯ್ ಕುಮಾರ್, ಅನುಪಮ್ ಖೇರ್, ಅನಿಲ್ ಕಪೂರ್, ರವೀನಾ ಟಂಡನ್ ಸೇರಿ ಹಲವು ಗಣ್ಯರು ಸಾಕ್ಷಿಯಾದರು.
ನವದೆಹಲಿ: ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಮಾಣ ಸ್ವೀಕರಿಸಿದ ಸಮಾರಂಭದಲ್ಲಿ ಬಾಲಿವುಡ್ ನಟರಾದ ಶಾರೂಖ್ ಖಾನ್, ಅಕ್ಷಯ್ ಕುಮಾರ್, ಅನುಪಮ್ ಖೇರ್, ಅನಿಲ್ ಕಪೂರ್, ರವೀನಾ ಟಂಡನ್ ಸೇರಿ ಹಲವು ಗಣ್ಯರು ಸಾಕ್ಷಿಯಾದರು.
ಅಷ್ಟೇ ಅಲ್ಲದೆ ಭಾರತದ ಶ್ರೀಮಂತ ಉದ್ಯಮಿಗಳಲ್ಲೊಬ್ಬರಾದ ಮುಖೇಶ್ ಅಂಬಾನಿ ಕುಟುಂಬ, ಗೌತಮ್ ಅದಾನಿ ಕುಟುಂಬ, ತಮಿಳು ನಟ ರಜನಿಕಾಂತ್, ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟಿಲ್ ಹಾಗೂ ರಾಮನಾಥ್ ಕೋವಿಂದ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಇದರ ಜೊತೆಗೆ ಹಲವು ಧಾರ್ಮಿಕ ಗುರುಗಳೂ ಸಹ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.