ಮುಂಗಾರು ಸಿದ್ಧತೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬೊಮ್ಮಾಯಿ

| Published : Jun 01 2024, 01:45 AM IST / Updated: Jun 01 2024, 05:07 AM IST

ಮುಂಗಾರು ಸಿದ್ಧತೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬೊಮ್ಮಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಉತ್ತರ ಕರ್ನಾಟಕದಲ್ಲಿ ರೈತರು ಮುಂಗಾರು ಬಿತ್ತನೆ ಆರಂಭಿಸಿದ್ದು, ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗಿದೆ.

ಹಾವೇರಿ: ಉತ್ತರ ಕರ್ನಾಟಕದಲ್ಲಿ ರೈತರು ಮುಂಗಾರು ಬಿತ್ತನೆ ಆರಂಭಿಸಿದ್ದು, ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗಿದೆ. 

ಮಳೆ ಬಿದ್ದರೂ ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಜೊತೆಗೆ ಬೀಜದ ದರ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಮುಂಗಾರು ಸಿದ್ಧತೆಯಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅನ್ನಭಾಗ್ಯ, ಅನ್ನ ಭಾಗ್ಯ ಅಂತಾ ಹೇಳ್ತಾರೆ ಅನ್ನಕ್ಕೆ ಮೊದಲು ಬೇಕಾಗಿರೋದು ಬಿತ್ತನೆ ಬೀಜ. ರೈತರಿಗೆ ಏನು ಗ್ಯಾರಂಟಿ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ?. 

ರೈತರಿಗೆ ಮುಖ್ಯವಾಗಿ ಬೇಕಾಗಿದ್ದ ಬಿತ್ತನೆ ಬೀಜದ ಗ್ಯಾರಂಟಿ ಇಲ್ಲ. ಹೆಕ್ಟೇರ್‌ಗೆ 25000 ರು. ಪ್ರೋತ್ಸಾಹ ಧನ ಕೊಡಬೇಕು. ರೈತರಿಗೆ ಬೇಕಾಗಿದ್ದನ್ನು ಬಿಟ್ಟು ಉಳಿದಿದ್ದೆಲ್ಲ ಇದೆ. ಈ ವರ್ಷ ಮಾರ್ಕೆಟಿಂಗ್ ಫೆಡರೇಷನ್‌ಗೆ ಒಂದು ನಯಾ ಪೈಸೆ ಕೊಟ್ಟಿಲ್ಲ. ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶ ಮಾಡಬೇಕು, ಫೆಡರೇಶನ್‌ಗೆ ಅನುದಾನ ಕೊಡಬೇಕು ಎಂದು ಒತ್ತಾಯಿಸಿದರು.