ಸಾರಾಂಶ
ದೆಹಲಿ, ಪಂಜಾಬ್, ಹರ್ಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸೇರಿದಂತೆ ವಾಯುವ್ಯ ಭಾರತದಲ್ಲಿ ಬಿಸಿಗಾಳಿಯ ತಾಪಮಾನ ಇನ್ನೂ 5 ದಿನ ಮುಂದುವರೆಯಲಿದೆ ಮತ್ತು ಉಷ್ಣಹವೆ ಅತ್ಯಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನವದೆಹಲಿ: ದೆಹಲಿ, ಪಂಜಾಬ್, ಹರ್ಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸೇರಿದಂತೆ ವಾಯುವ್ಯ ಭಾರತದಲ್ಲಿ ಬಿಸಿಗಾಳಿಯ ತಾಪಮಾನ ಇನ್ನೂ 5 ದಿನ ಮುಂದುವರೆಯಲಿದೆ ಮತ್ತು ಉಷ್ಣಹವೆ ಅತ್ಯಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಭಾರತದಲ್ಲಿ ಹಲವು ರಾಜ್ಯಗಳಲ್ಲಿ ಶುಕ್ರವಾರ ಬಿಸಿಗಾಳಿ ತಾಪಮಾನ ಅತ್ಯಧಿಕವಾಗಿತ್ತು. ದೆಹಲಿಯ ನಜಾಫ್‌ಗಢ್‌ನಲ್ಲಿ 47.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು, ಇದು ಈ ವರ್ಷದಲ್ಲಿ ದಾಖಲಾದ ಅತ್ಯಧಿಕ ತಾಪಮಾನ ಮತ್ತು ಶುಕ್ರವಾರ ಇಡೀ ದೇಶದಲ್ಲೇ ದಾಖಲಾದ ಗರಿಷ್ಠ ಉಷ್ಣಾಂಶವಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ, ಪಂಜಾಬ್, ಹರ್ಯಾಣ, ಪಶ್ಚಿಮ ರಾಜಸ್ಥಾನ ಭಾಗಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಮತ್ತು ಉತ್ತರಪ್ರದೇಶ, ಬಿಹಾರ, ಪೂರ್ವ ರಾಜಸ್ಥಾನದಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.