ಸಾರಾಂಶ
ಮೂರು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ಬ್ರೇಕ್ ಹಾಕುವ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.
ನವದೆಹಲಿ: ಮೂರು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ಬ್ರೇಕ್ ಹಾಕುವ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್‌ಕಿ ಅವರು ಸಂಧಾನ ಮಾತುಕತೆಗೆ ಸಿದ್ಧನಿರುವುದಾಗಿ ನನಗೆ ಪತ್ರ ಬರೆದಿದ್ದಾರೆ. ಇನ್ನೊಂದು ಕಡೆ ರಷ್ಯಾ ಅಧ್ಯಕ್ಷ ಪುಟಿನ್ ಕೂಡ ಶಾಂತಿಯ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.
ಅಮೆರಿಕ ಕಾಂಗ್ರೆಸ್‌ನ ಜಂಟಿ ಸದನವನ್ನುದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್ ಯುದ್ಧಕ್ಕೆ ಅಂತ್ಯ ಹಾಡಲು ಬಿಡುವಿಲ್ಲದೆ ಕೆಲಸ ಮಾಡುತ್ತಿದ್ದೇನೆ. ಯಾವುದೇ ಸ್ಪಷ್ಟ ಅಂತ್ಯವಿಲ್ಲದ ಈ ಯುದ್ಧದಲ್ಲಿ ಲಕ್ಷಾಂತರ ಮಂದಿ ಉಕ್ರೇನಿಗರು ಮತ್ತು ರಷ್ಯನ್ನರು ಕೊನೆಯುಸಿರೆಳೆದಿದ್ದಾರೆ. ಇದು ಹುಚ್ಚಾಟವನ್ನು, ಹತ್ಯೆಗಳನ್ನು, ಅರ್ಥವಿಲ್ಲದ ಯುದ್ಧವನ್ನು ನಿಲ್ಲಿಸುವ ಸಮಯ. ಯುದ್ಧ ನಿಲ್ಲಿಸಬೇಕಿದ್ದರೆ ಎರಡೂ ಪಕ್ಷಗಳ ಜತೆಗೆ ಮಾತುಕತೆ ನಡೆಸುವುದು ಅನಿವಾರ್ಯ ಎಂದು ಟ್ರಂಪ್ ಹೇಳಿದರು.