ಸಾರಾಂಶ
ಕೋಚಿಂಗ್ ಹಬ್ ಅಂತಲೇ ಖ್ಯಾತಿ ಪಡೆದಿರುವ ರಾಜಸ್ಥಾನದ ಕೋಟದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜೆಇಇಗೆ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಇಲ್ಲಿ ಕೋಚಿಂಗ್ ಸೆಂಟರ್‌ವೊಂದರ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೋಟ(ರಾಜಸ್ಥಾನ): ಕೋಚಿಂಗ್ ಹಬ್ ಅಂತಲೇ ಖ್ಯಾತಿ ಪಡೆದಿರುವ ರಾಜಸ್ಥಾನದ ಕೋಟದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜೆಇಇಗೆ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಇಲ್ಲಿ ಕೋಚಿಂಗ್ ಸೆಂಟರ್‌ವೊಂದರ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದು ಈ ವರ್ಷದಲ್ಲಿ ದಾಖಲಾದ 16ನೇ ಆತ್ಮಹತ್ಯೆ ಪ್ರಕರಣವಾಗಿದೆ.
ಮಧ್ಯಪ್ರದೇಶದ ಅಣ್ಣುಪುರ ಮೂಲದ ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕಳೆದ ಏಪ್ರಿಲ್‌ನಿಂದ ಕೋಟದ ಕೋಚಿಂಗ್ ಸೆಂಟರ್‌ನಲ್ಲಿ ಜೆಇಇಗೆ ತರಬೇತಿ ಪಡೆಯುತ್ತಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಇದು ಈ ವರ್ಷದಲ್ಲಿ ಕೋಟದಲ್ಲಿ ದಾಖಲಾದ 16ನೇ ಆತ್ಮಹತ್ಯೆ ಪ್ರಕರಣವಾಗಿದೆ. ಕಳೆದ ವರ್ಷ 26 ವಿದ್ಯಾರ್ಥಿಗಳು ಸೂಸೈಡ್ ಮಾಡಿಕೊಂಡಿದ್ದರು.