ಸಾರಾಂಶ
ಉತ್ತರ ಪ್ರದೇಶದ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ಲಾಂಗು ಮಚ್ಚು ಮುಂತಾದ ಹರಿತ ಆಯುಧಗಳನ್ನು ತಂದಿರುವ ಘಟನೆ ನಡೆದಿದೆ.
ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕಬ್ಬಿಣದ ರಾಡ್‌ಗಳು, ಚೈನ್‌ಗಳು ಹಾಗೂ ಹರಿತವಾದ ಆಯುಧಗಳನ್ನು ತೆಗೆದುಕೊಂಡು ಹೋಗಿರುವ ಘಟನೆ ಉತ್ತರಪ್ರದೇಶದ ಮುಜಫ್ಫರ್‌ನಗರದಲ್ಲಿ ನಡೆದಿದೆ.
ಈ ಬಗ್ಗೆ ಕೆಕೆ ಜೈನ್ ಇಂಟರ್ ಕಾಲೇಜಿನ ಪ್ರಾಂಶುಪಾಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕೂಡಲೇ ಪರೀಕ್ಷಾ ಕೇಂದ್ರಕ್ಕೆ ಧಾವಿಸಿದ ಪೊಲೀಸರು, ವಿದ್ಯಾರ್ಥಿಗಳ ದ್ವಿಚಕ್ರ ವಾಹನಗಳಿಗೆ ನೇತುಹಾಕಿದ್ದ ಬ್ಯಾಗ್‌ಗಳಲ್ಲಿದ್ದ ಕಬ್ಬಿಣದ ರಾಡ್‌ಗಳು, ಚೈನ್‌ಗಳು ಮತ್ತು ಹರಿತವಾದ ಆಯುಧಗಳು ವಶಪಡಿಸಿಕೊಂಡಿದ್ದು, ಈ ವಿದ್ಯಾರ್ಥಿಗಳಲ್ಲಿ 12 ಮಂದಿ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ.