ಸಾರಾಂಶ
ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು ಹಾಗೂ ಎಚ್.ಎಸ್.ಪ್ರಯಣ್ ಮತ್ತೊಮ್ಮೆ ನಿರಾಸೆ ಮೂಡಿಸಿದ ಪರಿಣಾಮ, ಸುದಿರ್‌ಮನ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಭಾರತ ಹೊರಬಿದ್ದಿದೆ.
ಕಿಯಾಮೆನ್ (ಚೀನಾ): ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು ಹಾಗೂ ಎಚ್.ಎಸ್.ಪ್ರಯಣ್ ಮತ್ತೊಮ್ಮೆ ನಿರಾಸೆ ಮೂಡಿಸಿದ ಪರಿಣಾಮ, ಸುದಿರ್‌ಮನ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಭಾರತ ಹೊರಬಿದ್ದಿದೆ. ಮಂಗಳವಾರ ನಡೆದ ಗುಂಪು ‘ಡಿ’ ಪಂದ್ಯದಲ್ಲಿ ಭಾರತಕ್ಕೆ ಇಂಡೋನೇಷ್ಯಾ ವಿರುದ್ಧ 1-3 ಅಂತರದಲ್ಲಿ ಸೋಲು ಎದುರಾಯಿತು.
ಮೊದಲ ಪಂದ್ಯದಲ್ಲಿ ಡೆನ್ಮಾರ್ಕ್ ವಿರುದ್ಧ 1-4ರಲ್ಲಿ ಸೋತಿದ್ದ ಭಾರತ, ನಾಕೌಟ್ ಹಂತಕ್ಕೆ ಪ್ರವೇಶಿಸುವ ರೇಸ್‌ನಲ್ಲಿ ಉಳಿಯಬೇಕಿದ್ದರೆ ಇಂಡೋನೇಷ್ಯಾ ವಿರುದ್ಧ ಗೆಲ್ಲಲೇಬೇಕಿತ್ತು. ಮಿಶ್ರ ಡಬಲ್ಸ್‌ನಲ್ಲಿ ಧೃವ್ ಕಪಿಲಾ ಹಾಗೂ ತನಿಶಾ ಕ್ರಾಸ್ಟೋ ಗೆಲುವು ಸಾಧಿಸಿ ಆರಂಭಿಕ ಮುನ್ನಡೆ ಒದಗಿಸಿದರು. ಆದರೆ, ಮಹಿಳಾ ಸಿಂಗಲ್ಸ್‌ನಲ್ಲಿ ಸಿಂಧು, ಪುರುಷರ ಸಿಂಗಲ್ಸ್‌ನಲ್ಲಿ ಪ್ರಣಯ್, ಮಹಿಳೆಯರ ಡಬಲ್ಸ್‌ನಲ್ಲಿ ಪ್ರಿಯಾ ಹಾಗೂ ಶೃತಿ ಮಿಶ್ರಾ ಸೋಲುಂಡರು. ಭಾರತ ಗುಂಪಿನ ಕೊನೆಯ ಪಂದ್ಯದಲ್ಲಿ ಈಗಾಗಲೇ ಹೊರಬಿದ್ದಿರುವ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.