ಸಾರಾಂಶ
370ನೇ ವಿಧಿ ರದ್ದತಿಯ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಕ್ರಮವನ್ನು ಮರುಪರಿಶೀಲನೆ ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ.
ನವದೆಹಲಿ: ಸಂವಿಧಾನದ 370 ನೇ ವಿಧಿಯ ಅಡಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ
ರದ್ದುಗೊಳಿಸಿದ ತನ್ನ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಮುಖ್ಯ ನ್ಯಾ। ಡಿ.ವೈ, ಚಂದ್ರಚೂಡ್ ನೇತೃತ್ವದ ಪಂಚಸದಸ್ಯ ಪೀಠವು ಡಿ.11, 2023ರಂದು ನೀಡಿದ ತೀರ್ಪಿನಲ್ಲಿ ಯಾವುದೇ ದೋಷವಿಲ್ಲ ಎಂದು ತಿಳಿಸಿದ ಕೋರ್ಟ್, ಮರುಪರಿಶೀಲನಾ ಅರ್ಜಿಗಳನ್ನು ಚೇಂಬರ್‌ನಲ್ಲೇ ವಜಾಗೊಳಿಸಿದೆ.
ಮೇ 1ರಂದೇ ತೀರ್ಪು ಪ್ರಕಟವಾಗಿದ್ದು, ಮಂಗಳವಾರ ಇದನ್ನು ಬಹಿರಂಗಪಡಿಸಲಾಗಿದೆ.