ಕೋವಿಶೀಲ್ಡ್‌ ಅಡ್ಡಪರಿಣಾಮ: ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

| Published : May 07 2024, 01:01 AM IST / Updated: May 07 2024, 07:38 AM IST

ಕೋವಿಶೀಲ್ಡ್‌ ಅಡ್ಡಪರಿಣಾಮ: ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ಕೋವಿಡ್‌ ಲಸಿಕೆಯಿಂದ ಅಪರೂಪದ ಸಂದರ್ಭದಲ್ಲಿ ಅಡ್ಡಪರಿಣಾಮ ಉಂಟಾಗುವುದು ನಿಜ ಎಂದು ಅಸ್ಟ್ರಾಜೆನಿಕಾ ಸಂಸ್ಥೆ ಬ್ರಿಟನ್‌ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡ ಬೆನ್ನಲ್ಲೇ ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆಯಿಂದ ಉಂಟಾಗುವ ಅಡ್ಡಪರಿಣಾಮಗಳ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ನವದೆಹಲಿ: ಕೋವಿಡ್‌ ಲಸಿಕೆಯಿಂದ ಅಪರೂಪದ ಸಂದರ್ಭದಲ್ಲಿ ಅಡ್ಡಪರಿಣಾಮ ಉಂಟಾಗುವುದು ನಿಜ ಎಂದು ಅಸ್ಟ್ರಾಜೆನಿಕಾ ಸಂಸ್ಥೆ ಬ್ರಿಟನ್‌ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡ ಬೆನ್ನಲ್ಲೇ ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆಯಿಂದ ಉಂಟಾಗುವ ಅಡ್ಡಪರಿಣಾಮಗಳ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ಈ ಕುರಿತು ಕೋವಿಡ್‌ನಿಂದಾಗಿ ತಮ್ಮ ಮಗಳನ್ನು ಕಳೆದುಕೊಂಡಿದ್ದ ಗೋವಿಂದನ್‌ ಎಂಬ ವ್ಯಕ್ತಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕೋವಿಡ್‌ ಲಸಿಕೆಯಿಂದ ಉಂಟಾಗುವ ಅಡ್ಡಪರಿಣಾಮಗಳ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ನಡೆಯಬೇಕು. ಹಾಗೆಯೇ ಈ ಲಸಿಕೆ ಸೇವನೆಯಿಂದ ಸಾವನ್ನಪ್ಪಿದ ಕುಟುಂಬಗಳಿಗೆ ಪರಿಹಾರ ನೀಡಲನ್ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಆಸ್ಟ್ರಾಜೆನೆಕಾದ ಸೋದರ ಸಂಸ್ಥೆ ಸೀರಂ ಉತ್ಪಾದಿತ ಕೋವಿಶೀಲ್ಡ್‌ ಲಸಿಕೆಯನ್ನು ತಯಾರು ಮಾಡಿದ್ದ ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಸಂಸ್ಥೆಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.