ಸಾರಾಂಶ
ವಾರಾಣಸಿಯಲ್ಲಿ ವಿವಾದಿತ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದ ಕಾರಂಜಿಯನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ನವದೆಹಲಿ: ವಾರಾಣಸಿಯ ಗ್ಯಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಹೋಲುವ ಶಿಲೆ ಪತ್ತೆಯಾಗಿದ್ದ ನೀರಿನ ಕಾರಂಜಿಯನ್ನು ಸ್ವಚ್ಛಗೊಳಿಸಲು ಸುಪ್ರೀಂಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
ಈ ಕಾರಂಜಿಯಲ್ಲಿ ಕೆಲವು ಮೀನುಗಳು ಸತ್ತಿದ್ದು, ಅದನ್ನು ಶುಚಿಗೊಳಿಸಲು ಅನುಮತಿ ನೀಡಬೇಕು ಎಂದು ಕೋರಿ ಹಿಂದೂ ಪರ ಅರ್ಜಿದಾರರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಪರ ಅರ್ಜಿದಾರರು ಕಾರಂಜಿ ಸ್ವಚ್ಛಗೊಳಿಸುವುದು ನಮ್ಮ ಜವಾಬ್ದಾರಿ ಎಂದಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾ।ಜೆ.ಬಿ.ಪರ್ದೀವಾಲಾ ಮತ್ತು ನ್ಯಾ।ಮನೋಜ್ ಮಿಶ್ರಾ ಅವರಿದ್ದ ಪೀಠ, ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ಕಾರಂಜಿ ಸ್ವಚ್ಛಗೊಳಿಸಲು ಅನುಮತಿ ನೀಡಿದೆ.