ದಿಲ್ಲಿ ಅಬಕಾರಿ ಹಗರಣ: ಕವಿತಾಗೆ ಜಾಮೀನು ನೀಡಲು ಸುಪ್ರೀಂ ನಕಾರ

| Published : Mar 23 2024, 01:00 AM IST

ದಿಲ್ಲಿ ಅಬಕಾರಿ ಹಗರಣ: ಕವಿತಾಗೆ ಜಾಮೀನು ನೀಡಲು ಸುಪ್ರೀಂ ನಕಾರ
Share this Article
  • FB
  • TW
  • Linkdin
  • Email

ಸಾರಾಂಶ

ದಿಲ್ಲಿ ಅಬಕಾರಿ ಹಗರಣದಲ್ಲಿ ಕವಿತಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ನವದೆಹಲಿ: ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಲು ಬಿಆರ್‌ಎಸ್‌ ನಾಯಕಿ ಕೆ. ಕವಿತಾಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಜಾಮೀನು ಕೋರಿ ಕವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಮೊದಲು ವಿಚಾರಣಾ ಕೋರ್ಟ್‌ಗೆ ಹೋಗಿ ನಂತರ ಇಲ್ಲಿ ಜಾಮೀನು ಅರ್ಜಿ ಸಲ್ಲಿಸಿ.

ನೇರವಾಗಿ ಇಲ್ಲಿ ಬರುವುದು ಶಿಷ್ಟಾಚಾರದ ಉಲ್ಲಂಘನೆ ಎಂದು ಹೇಳಿ ಅರ್ಜಿ ವಜಾ ಮಾಡಿತು.

ಇನ್ನು ಅಕ್ರಮ ಹಣ ವರ್ಗಾವಣೆ ಕೇಸು ಪ್ರಶ್ನಿಸಿದ್ದ ಕವಿತಾ ಅರ್ಜಿಗೆ ಸಂಬಂಧಿಸಿದಂತೆ ಕೋರ್ಟು, ಇ.ಡಿ.ಗೆ ನೋಟಿಸ್‌ ನೀಡಿ 6 ವಾರದಲ್ಲಿ ಉತ್ತರಿಸಲು ತಿಳಿಸಿತು.