ಸಾರಾಂಶ
ಚುನಾವಣಾ ಆಯುಕ್ತರ ನೇಮಕವನ್ನು ಹಿಂದಿನ ಕಾಯ್ದೆಯ ಅನುಸಾರವೇ ಮಾಡಬೇಕು ಎಂದು ಎಡಿಆರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಪಿಟಿಐ ನವದೆಹಲಿ
ಸಿಇಸಿ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಎನ್‌ಜಿಒ ಸಲ್ಲಿಸಿದ ಅರ್ಜಿಯನ್ನು ಮಾ.15 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿದೆ.ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯ್ದೆ- 2023ರ ನಿಬಂಧನೆಗಳ ಸಿಂಧುತ್ವವನ್ನು ಪ್ರಶ್ನಿಸಿ ಭೂಷಣ್ ಅರ್ಜಿ ಸಲ್ಲಿಸಿದ್ದಾರೆ. ಹೊಸ ಕಾನೂನಿನ ಪ್ರಕಾರ, ಆಯ್ಕೆ ಸಮಿತಿಯು ಪ್ರಧಾನಿ, ಲೋಕಸಭೆ ವಿಪಕ್ಷ ನಾಯಕ ಮತ್ತು ಪ್ರಧಾನಿಯಿಂದ ನಾಮನಿರ್ದೇಶನಗೊಂಡ ಒಬ್ಬ ಕೇಂದ್ರ ಸಚಿವರನ್ನು ಒಳಗೊಂಡಿರುತ್ತದೆ. ಆದರೆ ಸಮಿತಿಯಲ್ಲಿ ಸಿಜೆಐ ಏಕಿಲ್ಲ ಎಂದು ಭೂಷಣ್ ಪ್ರಶ್ನಿಸಿದ್ದಾರೆ.