ಒಂದೇ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ತಡೆ ಇಲ್ಲ: ಸುಪ್ರೀಂ

| Published : May 04 2024, 12:39 AM IST / Updated: May 04 2024, 05:05 AM IST

ಒಂದೇ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ತಡೆ ಇಲ್ಲ: ಸುಪ್ರೀಂ
Share this Article
  • FB
  • TW
  • Linkdin
  • Email

ಸಾರಾಂಶ

ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಹೇರಬೇಕು ಎಂದು ಕೋರಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

ನವದೆಹಲಿ: ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಹೇರಬೇಕು ಎಂದು ಕೋರಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಇಂಥ ನಿಷೇಧ ಜನರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಅದು ಸ್ಪಷ್ಟಪಡಿಸಿದೆ.

ಮತದಾರರ ದಾರಿ ತಪ್ಪಿಸುವುದಕ್ಕೆಂದೇ ಖ್ಯಾತನಾಮ ಅಭ್ಯರ್ಥಿಗಳ ಹೆಸರು ಹೊಂದಿರುವರನ್ನು ರಾಜಕೀಯದ ತಂತ್ರವಾಗಿ ಚುನಾವಣೆಗೆ ನಿಲ್ಲಿಸಲಾಗುತ್ತದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಅಂತಹ ಅಭ್ಯರ್ಥಿಗಳು ಹೆಚ್ಚಾಗಿ ಸೋಲು ಕೂಡ ಅನುಭವಿಸಿದ್ದಾರೆ. ಇದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಹಿನ್ನಡೆಯಾಗುತ್ತದೆ. ಹೀಗಾಗಿ ನ್ಯಾಯಯುತ ಮತದಾನ ನಡೆಯಬೇಕು ಎನ್ನುವ ಕಾರಣಕ್ಕೆ ಅಂತಹ ತಂತ್ರಗಾರಿಕೆಯನ್ನು ನಿಷೇಧಿಸಬೇಕೆಂದು ಕೋರಿ ಸಾಬು ಸ್ಟೀಪನ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ‘ ರಾಜಕೀಯ ನಾಯಕರ ಹೆಸರನ್ನು ಹೊಂದಿರುವವವರನ್ನು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ.. ಪೋಷಕರು ಅಭ್ಯರ್ಥಿಗಳಿಗೆ ಒಂದೇ ರೀತಿಯ ಹೆಸರನ್ನು ಇಟ್ಟರೆ ಅದನ್ನು ತಡೆಯುವುದು ಹೇಗೆ. ರಾಹುಲ್ ಗಾಂಧಿ , ಲಾಲು ಪ್ರಸಾದ್ ಯಾದವ್ ಅಂತ ಹೆಸರನ್ನು ಬೇರೆ ಯಾರಿಗೂ ಇಡಬಾರದಾ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅಲ್ಲದೇ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿದೆ.