ಸಾರಾಂಶ
ಹಿರಿಯ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಸಮಾಜವಾದಿ ಪಕ್ಷದ ಸದಸ್ಯತ್ವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಗುರುವಾರದಂದು ದೆಹಲಿಯಲ್ಲಿ ತಮ್ಮ ಕಾರ್ಯಕರ್ತರ ಸಮ್ಮುಖದಲ್ಲಿ ರಾಷ್ಟ್ರೀಯ ಶೋಷಿತ್ ಸಮಾಜ ಪಾರ್ಟಿ ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಲಖನೌ: ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಒಂದು ವಾರದ ಬಳಿಕ ಉತ್ತರಪ್ರದೇಶದ ಮಾಜಿ ಉಪಮುಖ್ಯಮಂತ್ರಿ ಸ್ವಾಮಿ ಪ್ರಸಾದ್ ಮೌರ್ಯ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌ಗೆ ಪತ್ರ ಬರೆದಿರುವ ಮೌರ್ಯ, ‘ಫೆ.13ರಂದು ನಾನು ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕವೂ ನನ್ನೊಂದಿಗೆ ಮಾತನಾಡುವ ಯಾವುದೇ ಪ್ರಯತ್ನವನ್ನು ಪಕ್ಷ ಮಾಡಲಿಲ್ಲ.
ಈ ಹಿನ್ನೆಲೆಯಲ್ಲಿ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಮೌರ್ಯ ಗುರುವಾರ ‘ರಾಷ್ಟ್ರೀಯ ಶೋಷಿತ್ ಸಮಾಜ ಪಾರ್ಟಿ’ ಎಂಬ ಹೊಸ ಪಕ್ಷ ಸ್ಥಾಪನೆ ಮಾಡಲಿದ್ದಾರೆ ಎನ್ನಲಾಗಿದೆ.