ಸಾರಾಂಶ
ತಮಿಳು ನಟ ಶರತ್‌ಕುಮಾರ್ ಅವರ ಎಐಎಸ್‌ಎಂಕೆ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಿದೆ.
ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ ಆರ್.ಶರತ್ ಕುಮಾರ್ ತಮ್ಮ ಪಕ್ಷ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿಯನ್ನು (ಎಐಎಸ್‌ಎಂಕೆ) ಮಂಗಳವಾರ ಬಿಜೆಪಿಯಲ್ಲಿ ವಿಲೀನಗೊಳಿಸಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗ ಈ ಬೆಳೆವಣಿಗೆ ನಡೆದಿದೆ.
ಇಲ್ಲಿಯ ಪಕ್ಷದ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಬಿಜೆಪಿ ತಮಿಳುನಾಡು ಘಟಕದ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ಸಮ್ಮುಖದಲ್ಲಿ ಶರತ್ ಕುಮಾರ್ ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ಸೇರ್ಪಡೆಗೊಳಿಸಿದರು.ಈ ವೇಳೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಹೊಗಳಿದ ಶರತ್, ‘ಮೋದಿಯ ನಾಯಕತ್ವ ಏಕತೆಯ ಬೆಳವಣಿಗೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಪೋಷಿಸುವ ಮೂಲಕ ದೇಶವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ಯುವಜನತೆ ಭವಿಷ್ಯ ಉಜ್ವಲವಾಗಿರುತ್ತದೆ’ ಎಂದು ಹೇಳಿದರು.