ಸಾರಾಂಶ
ಸ್ಟಾಲಿನ್ ಸರ್ಕಾರದ ವಿರುದ್ಧ ಸಮರ, ಸುಪ್ರೀಂ ಕೋರ್ಟ್ ಛೀಮಾರಿ ಬೆನ್ನಲ್ಲಿಯೇ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಇದೀಗ ಮತ್ತೊಂದು ವಿವಾದ ಸೃಷ್ಟಿಸಿಕೊಂಡಿದ್ದು, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಂದ ‘ಜೈ ಶ್ರೀರಾಮ್’ ಘೋಷಣೆ ಕೂಗಿಸಿ ವಿವಾದಕ್ಕೆ ಸಿಲುಕಿದ್ದಾರೆ.
ಚೆನ್ನೈ: ಸ್ಟಾಲಿನ್ ಸರ್ಕಾರದ ವಿರುದ್ಧ ಸಮರ, ಸುಪ್ರೀಂ ಕೋರ್ಟ್ ಛೀಮಾರಿ ಬೆನ್ನಲ್ಲಿಯೇ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಇದೀಗ ಮತ್ತೊಂದು ವಿವಾದ ಸೃಷ್ಟಿಸಿಕೊಂಡಿದ್ದು, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಂದ ‘ಜೈ ಶ್ರೀರಾಮ್’ ಘೋಷಣೆ ಕೂಗಿಸಿ ವಿವಾದಕ್ಕೆ ಸಿಲುಕಿದ್ದಾರೆ.
ಮಧುರೈನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು ತಮ್ಮ ಭಾಷಣದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ‘ಜೈ ಶ್ರೀರಾಮ್‘ ಘೋಷಣೆ ಕೂಗುವಂತೆ ಹೇಳಿದ್ದಾರೆ.
ಇದನ್ನು ಕಾಂಗ್ರೆಸ್ ಹಾಗೂ ಆಡಳಿತರೂಢ ಡಿಎಂಕೆ ಖಂಡಿಸಿದೆ. ಈ ಬಗ್ಗೆ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದು, ‘ವ್ಯವಸ್ಥೆಗಳನ್ನು ಕೆರಳಿಸಲು ವಿದ್ಯಾರ್ಥಿಗಳನ್ನು ಜೈ ಶ್ರೀರಾಮ್ ಜಪಿಸುವಂತೆ ಮಾಡುತ್ತಿದ್ದಾರೆ. ಅವರು ಹತಾಶಗೊಂಡಿದ್ದಾರೆ’ ಎಂದಿದ್ದಾರೆ.