ಸಾರಾಂಶ
ತಮಿಳುನಾಡಿನಲ್ಲಿ ಗುರುವಾರ ಭಾರಿ ಮಳೆಯಾಗಿದ್ದು. ಹಲವೆಡೆ ಭೂಕುಸಿತ ಸಂಭವಿಸಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಲವೆಡೆ ಭೂಕುಸಿತ, ಸಂಚಾರ ಸಾಮಾನ್ಯ ಜನಜೀವನಕ್ಕೆ ಅಡ್ಡಿ
ಚೆನ್ನೈ: ತಮಿಳುನಾಡಿನಲ್ಲಿ ಗುರುವಾರ ಭಾರಿ ಮಳೆಯಾಗಿದ್ದು. ಹಲವೆಡೆ ಭೂಕುಸಿತ ಸಂಭವಿಸಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ನೀಲಗಿರಿ ಜಿಲ್ಲೆಯ ಕೋಟಗಿರಿಯಲ್ಲಿ ಬರೋಬ್ಬರಿ 228 ಮಿ.ಮೀ ಮಳೆ ಸುರಿದಿದೆ. ಇನ್ನು ನಿರಂತರ ಮಳೆಯಿಂದಾಗಿ ನೀಲಗಿರಿ ಪರ್ವತ ರೈಲ್ವೇ ಮಾರ್ಗದಲ್ಲಿ ಸುಮಾರು ಐದು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದ್ದು, ಇಲ್ಲಿನ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ. ಕೋಟಗಿರಿಯಲ್ಲೂ ಭೂಕುಸಿತ ಸಂಭವಿಸಿದ್ದು ಅಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮಧುರೈ, ಥೇನಿ, ದಿಂಡಿಗಲ್, ತಿರುನೆಲ್ವೇಲಿ, ತೆಂಕಸಿ, ತಿರುಪ್ಪೂರ್ ಮತ್ತು ಕೊಯಮತ್ತೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಪ್ರಮಾಣದ ಮಳೆಗೆ ಕಾರಣವಾಗಿದೆ.