ಸಾರಾಂಶ
ಇತ್ತೀಚೆಗೆ ಟಿಎಂಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತಪಸ್ ರಾಯ್ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದು ಲೋಕಸಭೆ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಉಂಟಾದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಕೋಲ್ಕತಾ: ಲೋಕಸಭೆ ಚುನಾವಣೆಗೂ ಮುನ್ನ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ಗೆ ಹಿನ್ನಡೆ ಆಗಿದೆ.
ಇತ್ತೀಚೆಗಷ್ಟೇ ಟಿಎಂಸಿಗೆ ರಾಜೀನಾಮೆ ನೀಡಿದ್ದ ಪಕ್ಷದ ಮಾಜಿ ಶಾಸಕ ತಪಸ್ ರಾಯ್ ಬುಧವಾರ ಬಿಜೆಪಿ ಸೇರಿದ್ದಾರೆ.ಕೋಲ್ಕತಾದ ಬಿಜೆಪಿ ಕಚೇರಿಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ರಾಯ್ ಬಿಜೆಪಿಗೆ ಸೇರ್ಪಡೆಗೊಂಡರು.
ಈ ನಡುವೆ ಗುರುವಾರ ಮಧ್ಯಾಹ್ನ 12.30ಕ್ಕೆ ಬಿಜೆಪಿಗೆ ಮತ್ತೊಂದು ಮಹತ್ವದ ಸೇರ್ಪಡೆ ನಡೆಯಲಿದೆ ಎಂದು ಅಧಿಕಾರಿ ಹೇಳಿದ್ದಾರೆ.