ಸಾರಾಂಶ
ತಮಿಳು ನಟ ವಿಜಯ್ ಸ್ಥಾಪಿಸಿರುವ ಟಿವಿಕೆಎ ಪಕ್ಷದ ಪದಾಧಿಕಾರಿಗಳ ಸಭೆ ಪಕ್ಷದ ಪ್ರದಾನ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ನಡೆಯಲಿದೆ.
ಚೆನ್ನೈ: ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಇತ್ತೀಚೆಗಷ್ಟೇ ಸ್ಥಾಪಿಸಿರುವ ಹೊಸ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ ಪಕ್ಷದ ಮೊದಲ ಪದಾಧಿಕಾರಿಗಳ ಸಭೆ ಫೆ.19ರಂದು ಪಣೈಯ್ಯೂರಿನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.
ಇದಕ್ಕೂಮೊದಲು ಟಿವಿಕೆ ಪಕ್ಷವು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.
ನಮ್ಮ ಗುರಿ ಏನಿದ್ದರೂ 2026ರ ತಮಿಳುನಾಡು ವಿಧಾನಸಭೆ ಎಂದು ಪ್ರಕಟಿಸಿದ್ದರೂ, ಲೋಕಸಭಾ ಚುನಾವಣೆಯಲ್ಲಿ ಯಾರನ್ನು ಬೆಂಬಲಿಸಬೇಕು ಎನ್ನುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.