ದೇಶವ್ಯಾಪಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ತಿರುಪತಿ ಲಡ್ಡು ಕಲಬೆರೆಕೆ ವಿವಾದ : ನಾಲ್ವರ ಬಂಧನ

| N/A | Published : Feb 10 2025, 01:45 AM IST / Updated: Feb 10 2025, 05:45 AM IST

ಸಾರಾಂಶ

  ದೇಶವ್ಯಾಪಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ತಿರುಪತಿ ತಿಮ್ಮಪ್ಪನ ದೇಗುಲದ ಪ್ರಸಾದ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ

ತಿರುಪತಿ: ದೇಶವ್ಯಾಪಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ತಿರುಪತಿ ತಿಮ್ಮಪ್ಪನ ದೇಗುಲದ ಪ್ರಸಾದ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಟೆಂಡರ್‌ ಪಡೆಯುವ ಹಂತದಿಂದ ಪೂರೈಕೆ ತನಕ ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ.

ಬಂಧಿತರನ್ನು ಉತ್ತರಾಖಂಡ ರಾಜ್ಯದ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್‌ ಜೈನ್‌, ಪೂನಂಬಾಕ್ಕಂನ ವೈಷ್ಣವಿ ಡೈರಿಯ ಸಿಇಒ ಅಪೂರ್ವ ವಿನಯ್‌ ಕಾಂತ್ ಚಾವ್ಡಾ, ದುಂಡಿಗಲ್‌ನ ಎಆರ್‌ ಡೈರಿಯ ಎಂಡಿ ರಾಜು ರಾಜಶೇಖರನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತುಪ್ಪ ಪೂರೈಕೆಯ ನೆಪದಲ್ಲಿ ಈ ಆರೋಪಿಗಳು ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ದೃಢವಾಗಿದೆ. ತುಪ್ಪದ ಟೆಂಡರ್‌ ಪಡೆಯಲು ನಕಲಿ ದಾಖಲೆಗಳು, ಸೀಲ್ ಬಳಕೆ ಮಾಡಿದ್ದಾರೆ. ಜೊತೆಗೆ ದಾಖಲೆಗಳನ್ನು ತಿರುಚಲಾಗಿದೆ, ಅಲ್ಲದೇ ತುಪ್ಪ ಪೂರೈಕೆಯಲ್ಲಿಯೂ ವ್ಯತ್ಯಾಸ ನಡೆದಿದೆ ಎನ್ನುವ ಕಾರಣಕ್ಕೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

ಈ ಘಟನೆ ಬಳಿಕ ಟಿಟಿಡಿ, ಮರಳಿ ಕರ್ನಾಟಕದ ಕೆಎಂಎಫ್‌ನಿಂದ ತುಪ್ಪ ಮರುಖರೀದಿಗೆ ಮುಂದಾಗಿತ್ತು.