ಸಾರಾಂಶ
ಶನಿವಾರ ತಡರಾತ್ರಿ ಜಮ್ಮು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕಾ ದಾಳಿ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಬೇಕು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ.
ಪೂಂಚ್: ಶನಿವಾರ ತಡರಾತ್ರಿ ಜಮ್ಮು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕಾ ದಾಳಿ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಬೇಕು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ.
‘ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂವಿಧಾನದ 370ನೇ ವಿಧಿ ಕಾರಣ ಎಂದು ದೆಹಲಿಯಲ್ಲಿ ಆಳ್ವಿಕೆ ನಡೆಸುತ್ತಿರುವವರು ಹೇಳಿದ್ದರು. ಆದರೆ ಈಗ ಯಾವ 370 ವಿಧಿ ಇದೆ? ಇಲ್ಲ ಎಂದಾದಲ್ಲಿ ಭಯೋತ್ಪಾದನಾ ಕೃತ್ಯಗಳಿಗೆ ಕಾರಣ ಯಾರು? ದಾಳಿಯಲ್ಲಿ ಮೃತಪಟ್ಟವರು ಬಿಜೆಪಿಗರಲ್ಲವೇ? ಅವರಿಗೆ ಬದುಕುವ ಹಕ್ಕಿಲ್ಲವೇ? ಈ ದಾಳಿಯನ್ನು ಸರಿಯಾಗಿ ತನಿಖೆ ಮಾಡಬೇಕು ಇಲ್ಲವಾದರೆ ಅಂತಾರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಬೇಕು’ ಎಂದು ಫಾರೂಖ್ ಆಗ್ರಹಿಸಿದರು.