ಸಾರಾಂಶ
ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಕೊಲ್ಲುವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮೂರನೇ ಆರೋಪಿಯ ಬಂಧನವಾಗಿದೆ.
ಪಟನಾ: ಬಿಹಾರ ಸಿಎಂ ನಿತೀಶ್ ಕುಮಾರ್‌ನ್ನು ಗುಂಡಿಕ್ಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿರುವ ಸೋಷಿಯಲ್ ಮೀಡಿಯಾ ವಿಡಿಯೋದಲ್ಲಿ ಕಾಣಿಕೊಂಡಿದ್ದ 25 ವರ್ಷದ ಯುವಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಫೆ.14 ರಂದು ವಿಡಿಯೋ ನೋಡಿದ ಬಳಿಕ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಈ ಹಿಂದೆ ಇಬ್ಬರನ್ನು ಬಂಧಿಸಲಾಗಿತ್ತು. ಈಗ 3ನೇ ವ್ಯಕ್ತಿ ಬಂಧನವಾಗಿದೆ.
ಆರೋಪಿಯು ನಿತೀಶ್‌ರನ್ನು ಸಾರ್ವಜನಿಕವಾಗಿ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡುವುದಾಗಿ ವಿಡಿಯೋದಲ್ಲಿ ಹೇಳಿದ್ದಾಗಿ ಒಪ್ಪಿಕೊಂಡಿದ್ದಾನೆ.ನಾನು ಮುಂಬೈನಲ್ಲಿ ಓದುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಎಂದು ಬೇಡಿಕೊಂಡಿದ್ದಾನೆ.
ಬಹುಶಃ ಈತ ದಾರಿ ತಪ್ಪಿದ ಹುಡುಗ ಆಗಿರಬಹುದು ಎಂದು ಪೊಲೀಸರು ಹೇಳಿದ್ದಾರೆ.