ಮುಂಬೈನ ಕರಾವಳಿ ಪ್ರದೇಶದಲ್ಲಿ ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗದಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಪಲ್ಟಿಯಾಗಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ.

- ಓರ್ವ ಪವಾಡಸದೃಶ ರೀತಿ ಪಾರು

- ಅತಿ ಅವಸರವೇ ಅಪಘಾತಕ್ಕೆ ಕಾರಣಮುಂಬೈ: ಮುಂಬೈನ ಕರಾವಳಿ ಪ್ರದೇಶದಲ್ಲಿ ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗದಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಪಲ್ಟಿಯಾಗಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ.

ದಕ್ಷಿಣ ಮುಂಬೈನ ಮರೀನಾ ಡ್ರೈವ್‌ನಿಂದ ಹಾಜಿ ಅಲಿ ಕಡೆಗೆ ನಸುಕಿನ ಜಾವ 5.20ಕ್ಕೆ ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನಿರ್ಮಾಣ ಹಂತದ ಪಾರ್ಕಿಂಗ್‌ ಸ್ಥಳಕ್ಕೆ ಹಲವಾರು ಅಡಿಗಳಷ್ಟು ಉರುಳಿ ಬಿದ್ದಿದೆ. ಕೂಡಲೇ ಅಲ್ಲಿದ್ದ ಸ್ಥಳೀಯರು ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದ ನಾಲ್ವರನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದರಾದರೂ 3 ಯುವಕರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯಗಳು ಸಿಸಿಟೀವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್‌ ಎನಿಸುವಂತಿದೆ, ಇನ್ನು ಕಾರು ಬಿದ್ದ ರಭಸಕ್ಕೆ ಸೇತುವೆಯಲ್ಲಿ ನೇತು ಹಾಕಲಾಗಿದ್ದ ಸೂಚನಾ ಫಲಕಗಳೂ ಹರಿದುಹೋಗಿವೆ.