ಸಾರಾಂಶ
ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಅದರಿಂದಾಗುತ್ತಿರುವ ಅನಾಹುತಗಳು ಮುಂದುವರೆದಿದ್ದು, ಈವರೆಗೆ 28 ಮಂದಿ ಬಲಿಯಾಗಿದ್ದಾರೆ. ಈ ಸಂಖ್ಯೆ ಹೆಚ್ಚುವ ಆತಂಕವಿದೆ. ಅತ್ತ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಕಾಣೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಡಾರ್ಜೀಲಿಂಗ್/ಸಿಲಿಗುರಿ/ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಅದರಿಂದಾಗುತ್ತಿರುವ ಅನಾಹುತಗಳು ಮುಂದುವರೆದಿದ್ದು, ಈವರೆಗೆ 28 ಮಂದಿ ಬಲಿಯಾಗಿದ್ದಾರೆ. ಈ ಸಂಖ್ಯೆ ಹೆಚ್ಚುವ ಆತಂಕವಿದೆ. ಅತ್ತ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಕಾಣೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಭೂಕುಸಿತದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ದುರ್ಗಾ ಪೂಜೆಗಾಗಿ ಬಂದಿದ್ದ ಸಾವಿರಾರು ಪ್ರವಾಸಿಗರು ಅತಂತ್ರರಾಗಿದ್ದಾರೆ. ಸಿಲಿಗುರಿ ಭೇಟಿಗೆ ಹೊರಟಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ‘ಈ ಪ್ರವಾಹ ಮತ್ತು ಅದರಿಂದಾಗಿರುವ ವಿನಾಶ ಮಾನವರಿಂದಲೇ ಆಗಿದ್ದು’ ಎಂದರು.
ಜತೆಗೆ, ಮೃತರ ಕುಟುಂಬದವರಿಗೆ 5 ಲಕ್ಷ ರು. ಪರಿಹಾರವನ್ನೂ ಘೋಷಿಸಿದರು. ಪರಿಸ್ಥಿತಿ ಬಗ್ಗೆ ಮಾತನಾಡಿದ ಅಧಿಕಾರಿಗಳು, ‘ಈವರೆಗೆ ಮೃತ 23 ಮಂದಿಯ ವಿವರಗಳು ಲಭಿಸಿದೆ. 12 ತಾಸು ಸುರಿದ 300 ಎಂಎಂ ಮಳೆಯಿಂದ ಮಿರಿಕ್, ಸುಖಿಯಾಪೊಕ್, ಜೋರ್‌ಬಂಗ್ಲೋರಿಯಲ್ಲಿ ಭಾರೀ ಹಾನಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ’ ಎಂದರು.