ಸಾರಾಂಶ
ಭಾರತದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಗಣ್ಯರಾಗಿ ಹೊರಹೊಮ್ಮಿದ್ದಾರೆ. ‘ಮಾರ್ನಿಂಗ್ ಕನ್ಸಲ್ಟೆಂಟ್’ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಶೇ.69ರಷ್ಟು ಅನುಮೋದನೆ ಮೂಲಕ ಮೋದಿ ಅಗ್ರಸ್ಥಾನ ಪಡೆದಿದ್ದಾರೆ.
ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಗಣ್ಯರಾಗಿ ಹೊರಹೊಮ್ಮಿದ್ದಾರೆ. ‘ಮಾರ್ನಿಂಗ್ ಕನ್ಸಲ್ಟೆಂಟ್’ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಶೇ.69ರಷ್ಟು ಅನುಮೋದನೆ ಮೂಲಕ ಮೋದಿ ಅಗ್ರಸ್ಥಾನ ಪಡೆದಿದ್ದಾರೆ.
ಪಟ್ಟಿಯಲ್ಲಿ ಮೋದಿ ನಂತರದ ಸ್ಥಾನಗಳಲ್ಲಿ ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್, ಅರ್ಜೆಂಟಿನಾ ಅಧ್ಯಕ್ಷ ಜೇವಿಯರ್ ಮಿಲೀ, ಸ್ವಿಜರ್ಲೆಂಡ್ ಅಧ್ಯಕ್ಷ ವಯೋಲಾ ಆಮ್‌ಹರ್ಡ್, ಐರ್ಲೆಂಡ್ ಸಚಿವ ಸಿಮೋನ್ ಹ್ಯಾರಿಸ, ಬ್ರಿಟನ್‌ನ ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್ಮರ್, ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್, ಸ್ಪೇನ್ ಪ್ರಧಾನಿ ಪೆಡ್ರೋ ಸ್ಯಾನ್ಚೆಜ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಇದ್ದಾರೆ.ಫ್ರಾನ್ಸ್ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರನ್, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಹೆಸರು ಟಾಪ್ 10ರಲ್ಲಿ ಇಲ್ಲ ಎಂಬುದು ವಿಶೇಷ.