ಸಾರಾಂಶ
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತಡೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ಪುಟಿನ್ ಜೊತೆಗೆ ಮಾತುಕತೆಗೆ ಮುಂದಾಗಿರುವ ನಡುವೆಯೇ ಪುಟಿನ್ ಯುದ್ಧ ನಿಲ್ಲಿಸಲು ಕೆಲವು ಷರತ್ತುಗಳನ್ನು ವಿಧಿಸುವ ಸಾಧ್ಯತೆಯಿದೆ.
ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತಡೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ಪುಟಿನ್ ಜೊತೆಗೆ ಮಾತುಕತೆಗೆ ಮುಂದಾಗಿರುವ ನಡುವೆಯೇ ಪುಟಿನ್ ಯುದ್ಧ ನಿಲ್ಲಿಸಲು ಕೆಲವು ಷರತ್ತುಗಳನ್ನು ವಿಧಿಸುವ ಸಾಧ್ಯತೆಯಿದೆ.
ಬ್ಲೂಮ್‌ಬರ್ಗ್ ವರದಿ ಪ್ರಕಾರ, ಟ್ರಂಪ್ ಪ್ರಸ್ತಾಪಿಸಿದ 30 ದಿನಗಳ ಕದನ ವಿರಾಮ ಸಮಯದಲ್ಲಿ ಅಮೆರಿಕ ಉಕ್ರೇನ್‌ಗೆ ಎಲ್ಲ ಶಸ್ತ್ರಾಸ್ತ್ರಗಳ ಪೂರೈಕೆಯನ್ನು ನಿಲ್ಲಿಸಬೇಕು ಎಂಬ ಷರತ್ತನ್ನು ಪುಟಿನ್ ವಿಧಿಸಿದ್ದಾರೆ. ಅಲ್ಲದೇ ಅಮೆರಿಕ ಮಾತ್ರವಲ್ಲದೇ ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಸುತ್ತಿರುವ ಯುರೋಪ್ ಕೂಡ ಶಸ್ತ್ರಾಸ್ತ್ರ ಪೂರೈಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧ ಸ್ಥಗಿತಕ್ಕೆ ಸತತ ಪ್ರಯತ್ನ ನಡೆಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದರ ಭಾಗವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಯುದ್ಧವನ್ನು ಸ್ಥಗಿತಗೊಳಿಸುವುದು ಸಾಧ್ಯವೇ ಎಂಬುದನ್ನು ನೋಡೋಣ ಎಂದು ಸೋಮವಾರ ಟ್ರಂಪ್ ಹೇಳಿದ್ದರು.