ವಾಷಿಂಗ್ಟನ್‌ನಲ್ಲಿ ಸೇನೆ ನಿಯೋಜನೆಗೆ ಟ್ರಂಪ್ ಆದೇಶ

| N/A | Published : Aug 12 2025, 12:30 AM IST / Updated: Aug 12 2025, 05:33 AM IST

ಸಾರಾಂಶ

ಅಮೆರಿಕ ಅಧ್ಯಕ್ಷ ಟ್ರಂಪ್ ರಾಜಧಾನಿ ವಾಷಿಂಗ್ಟನ್ ಡಿಸಿಯ ಪೊಲೀಸ್ ಇಲಾಖೆಯನ್ನು ಸರ್ಕಾರದ ನಿಯಂತ್ರಣಕ್ಕೆ ಒಳಪಡಿಸಿ, ಆ ಜಾಗಕ್ಕೆ ರಾಷ್ಟ್ರೀಯ ಗಾರ್ಡ್‌ (ಸೇನೆ) ಅನ್ನು ನಿಯೋಜಿಸುವುದಾಗಿ ಸೋಮವಾರ ಘೋಷಿಸಿದ್ದಾರೆ.

 ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಟ್ರಂಪ್ ರಾಜಧಾನಿ ವಾಷಿಂಗ್ಟನ್ ಡಿಸಿಯ ಪೊಲೀಸ್ ಇಲಾಖೆಯನ್ನು ಸರ್ಕಾರದ ನಿಯಂತ್ರಣಕ್ಕೆ ಒಳಪಡಿಸಿ, ಆ ಜಾಗಕ್ಕೆ ರಾಷ್ಟ್ರೀಯ ಗಾರ್ಡ್‌ (ಸೇನೆ) ಅನ್ನು ನಿಯೋಜಿಸುವುದಾಗಿ ಸೋಮವಾರ ಘೋಷಿಸಿದ್ದಾರೆ. 

ರಾಜಧಾನಿಯಲ್ಲಿ ಹೆಚ್ಚುತ್ತಿರುವ ಅಪರಾಧ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಕಾನೂನು, ಸುವ್ಯವಸ್ಥೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಮದ್ಯ, ತಂಬಾಕು, ಬಂದೂಕುಗಳು ಮತ್ತು ಸ್ಫೋಟಕಗಳ ನಿಯಂತ್ರಣ ಘಟಕಗಳು ಸೇರಿ ಸುಮಾರು 100ಕ್ಕೂ ಅಧಿಕ ಅಧಿಕಾರಿಗಳನ್ನು ಈ ಪ್ರದೇಶದಲ್ಲಿ ನಿಯೋಜಿಸಲು ಟ್ರಂಪ್ ನಿರ್ಧರಿಸಿದ್ದಾರೆ.  ಈ ಹಿಂದೆ ಲಾಸ್‌ ಏಂಜಲೀಸ್‌ನಲ್ಲಿ ಟ್ರಂಪ್‌ರ ವಲಸೆ ನೀತಿ ವಿರೋಧಿಸಿ ನಡೆದ ಪ್ರತಿಭಟನೆಯನ್ನು ಹತ್ತಿಕ್ಕಲು ಟ್ರಂಪ್ ಸೇನೆ ನಿಯೋಜಿಸಿದ್ದರು.

Read more Articles on