ಸಾರಾಂಶ
ತಿರುಪತಿ ವೆಂಕಟೇಶ್ವರ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳುವ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಪ್ರತಿ ಭಾನುವಾರ ಚರ್ಚ್‌ಗೆ ಹೋಗುತ್ತಿದ್ದುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ತಿರುಮಲ: ತಿರುಪತಿ ವೆಂಕಟೇಶ್ವರ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳುವ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಪ್ರತಿ ಭಾನುವಾರ ಚರ್ಚ್‌ಗೆ ಹೋಗುತ್ತಿದ್ದುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಹಿಂದೂ ಧರ್ಮದ ಹೊರತಾಗಿ ಬೇರೆ ಧರ್ಮವನ್ನು ಪಾಲಿಸುವವರು ಟಿಟಿಡಿಯಲ್ಲಿ ಕೆಲಸ ಮಾಡುವಂತಿಲ್ಲ ಎಂಬ ನಿಯಮವಿದೆ. ಆದರೆ, ಪ್ರತಿ ಭಾನುವಾರ ಚರ್ಚ್‌ಗೆ ಹೋಗಿ ಕ್ರೈಸ್ತರ ಆಚರಣೆಗಳಲ್ಲಿ ಭಾಗಿಯಾಗುವ ಮೂಲಕ ರಾಜಶೇಖರ್ ಬಾಬು ಇದನ್ನು ಉಲ್ಲಂಘಿಸಿದ್ದರು ಎನ್ನಲಾಗಿದೆ.
ಬಾಬು ಅವರ ಚಲನವಲನದ ಮೇಲೆ ನಿಗಾ ವಹಿಸಿದ್ದ ಟಿಟಿಡಿಯ ಕಣ್ಗಾವಲು ವಿಭಾಗ ವರದಿ ಸಲ್ಲಿಸಿತ್ತು. ಅದರ ಬೆನ್ನಲ್ಲೇ ಅವರ ಅಮಾನತು ಆಗಿದೆ. ಇತ್ತೀಚಿನ ಕೆಲ ತಿಂಗಳಲ್ಲಿ ಅನ್ಯಧರ್ಮ ಪಾಲನೆ ಮಾಡುತ್ತಿದ್ದ ಹಲವು ಸಿಬ್ಬಂದಿಗೆ ಬೇರೆ ಇಲಾಖೆಗೆ ತೆರಳುವಂತೆ ಇಲ್ಲವೇ ಹುದ್ದೆ ತೆರೆಯುವಂತೆ ಟಿಟಿಡಿ ಸೂಚಿಸಿತ್ತು.