ಬೇರೆಡೆ ಹೋಗಿ, ಇಲ್ಲವೇ ನಿವೃತ್ತಿ : 18 ಹಿಂದುಯೇತರ ಸಿಬ್ಬಂದಿಗೆ ತಿರುಪತಿ ತಿರುಮಲ ದೇಗುಲದ ನೋಟಿಸ್‌

| N/A | Published : Feb 06 2025, 12:15 AM IST / Updated: Feb 06 2025, 05:26 AM IST

ಬೇರೆಡೆ ಹೋಗಿ, ಇಲ್ಲವೇ ನಿವೃತ್ತಿ : 18 ಹಿಂದುಯೇತರ ಸಿಬ್ಬಂದಿಗೆ ತಿರುಪತಿ ತಿರುಮಲ ದೇಗುಲದ ನೋಟಿಸ್‌
Share this Article
  • FB
  • TW
  • Linkdin
  • Email

ಸಾರಾಂಶ

ತಿರುಪತಿ ತಿರುಮಲ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 18 ಹಿಂದೂಯೇತರ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಟಿಟಿಡಿ, ಒಂದೋ ಸರ್ಕಾರದ ಬೇರೆ ಇಲಾಖೆಗೆ ವರ್ಗಾವಣೆ ಪಡೆದುಕೊಳ್ಳಿ ಅಥವಾ ಸ್ವಯಂ ನಿವೃತ್ತಿ ಪಡೆಯಿರಿ ಎಂದು ಸೂಚಿಸಿದೆ.

ತಿರುಪತಿ: ತಿರುಪತಿ ತಿರುಮಲ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 18 ಹಿಂದೂಯೇತರ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಟಿಟಿಡಿ, ಒಂದೋ ಸರ್ಕಾರದ ಬೇರೆ ಇಲಾಖೆಗೆ ವರ್ಗಾವಣೆ ಪಡೆದುಕೊಳ್ಳಿ ಅಥವಾ ಸ್ವಯಂ ನಿವೃತ್ತಿ ಪಡೆಯಿರಿ ಎಂದು ಸೂಚಿಸಿದೆ.

ದೇವಾಲಯದ ಧಾರ್ಮಿಕ ಚಟುವಟಿಕೆಗಳ ಪಾವಿತ್ರ್ಯ ಕಾಪಾಡುವ ಬದ್ಧತೆಗೆ ಅನುಗುಣವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿರುಪತಿ ತಿರುಮಲ ದೇಗುಲ ಮಂಡಳಿ ತಿಳಿಸಿದೆ.

ಈ ಹಿಂದೆ ಜಗನ್ ಮೋಹನ್ ರೆಡ್ಡಿ ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನ್ಯಮತೀಯರಿಗೂ ದೇಗುಲದಲ್ಲಿ ಕೆಲಸಕ್ಕೆ ಅವಕಾಶ ನೀಡಲಾಗಿತ್ತು. ಆದರೆ 2024ರ ಜೂನ್‌ನಲ್ಲಿ ಎನ್. ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾದ ಬಳಿಕ ಈ ಕ್ರಮವನ್ನು ಕೈಬಿಡುವ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಹೊಸ ಆಡಳಿತ ಮಂಡಳಿ ರಚನೆಯನ್ನೂ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ, ಟಿಟಿಡಿ ಹೊಸ ಆದೇಶ ಹೊರಡಿಸಿದೆ. ದೇವಸ್ಥಾನದ ಉತ್ಸವಗಳು ಮತ್ತು ಧಾರ್ಮಿಕ ವಿಧಿಗಳಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಹಿಂದೂಯೇತರ ಧಾರ್ಮಿಕ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರ ವಿರುದ್ಧ 18 ಜನರ ಮೇಲೆ ಶಿಸ್ತುಕ್ರಮಕ್ಕೆ ಆದೇಶ ನೀಡಲಾಗಿದೆ.