ಸಾರಾಂಶ
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್, ಎನ್‌ಪಿಪಿ ಪಕ್ಷದ ತಲಾ ಇಬ್ಬರು ಸೇರಿ ನಾಲ್ವರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇಟಾನಗರ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಮುನ್ನ ಅರಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ತಲಾ ಇಬ್ಬರು ಸೇರಿ ಒಟ್ಟು ನಾಲ್ವರು ಶಾಸಕರು ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾದರು.
ಎರಡೂ ಚುನಾವಣೆ ಹೊಸ್ತಿಲಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಇದು ಇನ್ನಷ್ಟು ಬಲ ನೀಡಿದೆ ಎಂದು ವಿಶ್ಲೇಷಿಸಲಾಗಿದೆ.ಕಾಂಗ್ರೆಸ್‌ನಿಂದ ಮಾಜಿ ಕೇಂದ್ರ ಸಚಿವ ನಿನೋಂಗ್ ಎರಿಂಗ್ ಮತ್ತು ವಾಂಗ್ಲಿನ್ ಲೋವಾಂಗ್‌ಡಾಂಗ್ ಹಾಗೂ ಎನ್‌ಪಿಪಿಯ ಮುಚ್ಚು ಮಿಠಿ ಗೋಕಾರ್ ಬಾಸರ್ ಇಲ್ಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸೇರಿದರು. 60 ಸದಸ್ಯ ಬಲದ ರಾಜ್ಯದ ವಿಧಾನಸಭೆಯಲ್ಲಿ ವಿಪಕ್ಷದಲ್ಲಿ ಸದ್ಯ ಕಾಂಗ್ರೆಸ್ ಹಾಗೂ ಎನ್‌ಪಿಪಿಯ ತಲಾ ಇಬ್ಬರು ಶಾಸಕರು ಮಾತ್ರ ಉಳಿದುಕೊಂಡಿದ್ದಾರೆ.