ಸಾರಾಂಶ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ರೂಲಿಂಗ್ ಹೊರಡಿಸಿದ್ದ ಮಹಾರಾಷ್ಟ್ರ ಸ್ಪೀಕರ್ ನಾರ್ವೇಕರ್ ತೀರ್ಪನ್ನು ಪ್ರಶ್ನಿಸಿ ಉದ್ಧವ್ ಬಣದ ಶಿವಸೇನೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ನಿರ್ಣಯ ಹೊರಡಿಸಿದ್ದ ಮಹಾರಾಷ್ಟ್ರ ಸ್ಪೀಕರ್ ಆದೇಶ ಪ್ರಶ್ನಿಸಿ ಉದ್ಧವ್ ಬಣ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಜ.10ರಂದು ನೀಡಿದ ಆದೇಶದಲ್ಲಿ ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್, ‘ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಪಕ್ಷ’ ಎಂದು ತೀರ್ಪು ನೀಡಿದ್ದರು.
ಅಲ್ಲದೆ ಶಿಂಧೆ ಬಣದ 16 ಶಾಸಕರನ್ನು ಅನರ್ಹ ಮಾಡಬೇಕೆಂಬ ಉದ್ಧವ್ ಬಣದ ಮನವಿಯನ್ನು ತಿರಸ್ಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಇವರ ಆದೇಶವನ್ನು ಪ್ರಶ್ನಿಸಿ ಉದ್ಧವ್ ಬಣ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.