ಸಾರಾಂಶ
ಕನ್ನಡ ಸೇರಿ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಪಠ್ಯ ಪುಸ್ತಕಗಳನ್ನು ಬರೆಯಲು ಅರ್ಜಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಆಹ್ವಾನಿಸಿದೆ.
ನವದೆಹಲಿ: 2020ರ ನೂತನ ಶಿಕ್ಷಣ ನೀತಿಯ ಜಾರಿ ಉದ್ದೇಶದಿಂದ ಪದವಿಪೂರ್ವ ಶೈಕ್ಷಣಿಕ ಕೋರ್ಸುಗಳ ಕಲಾ, ವಿಜ್ಞಾನ, ವಾಣಿಜ್ಯ ಮತ್ತು ಸಮಾಜ ವಿಜ್ಞಾನ ವಿಷಯಗಳ ಕುರಿತು ಕನ್ನಡ ಸೇರಿದಂತೆ 12 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಬರೆಯಲು ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ), ಉನ್ನತ ಶಿಕ್ಷಣ ಸಂಸ್ಥೆಗಳ ಆಸಕ್ತ ಲೇಖಕರು, ವಿಮರ್ಶಕರು ಮತ್ತು ಅಧ್ಯಾಪಕರಿಂದ ಅರ್ಜಿ ಆಹ್ವಾನಿಸಿದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಪಠ್ಯ ಪುಸ್ತಕಗಳನ್ನು ಬರೆಯಲು ಅರ್ಜಿಗಳನ್ನು ಆಹ್ವಾನಿಸಿದೆ.
ಭಾರತೀಯ ಭಾಷೆಗಳಲ್ಲಿ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶಗಳನ್ನು ಒದಗಿಸುವ ನೂತನ ಶಿಕ್ಷಣ ನೀತಿ 2020ರ ಗುರಿಗೆ ಅನುಗುಣವಾಗಿದೆ ಎಂದು ಯುಜಿಸಿ ಹೇಳಿದೆ. ಆಸಕ್ತ ಲೇಖಕರು ಆಯೋಗಕ್ಕೆ ತಮ್ಮ ಅರ್ಜಿಯನ್ನು ಕಳುಹಿಸಲು ಕೇಳಿದೆ.