ಉತ್ತರಪ್ರದೇಶದ ಬ್ರಹೈಚ್ ಮೂಲದ 35 ವರ್ಷದ ಗರ್ಭಿಣಿಯೊಬ್ಬರು ಹೆರಿಗೆ ನೋವು ತಾಳಲಾರದೆ ತನ್ನ ಹೊಟ್ಟೆಯನ್ನು ತಾನೇ ಚಾಕುವಿನಿಂದ ಕುಯ್ದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಹೆಣ್ಣು ಮಗು ಅಪಾಯದಿಂದ ಪಾರಾಗಿ ಜನ್ಮತಾಳಿದೆ.
ಬಹ್ರೈಚ್: ಉತ್ತರಪ್ರದೇಶದ ಬ್ರಹೈಚ್ ಮೂಲದ 35 ವರ್ಷದ ಗರ್ಭಿಣಿಯೊಬ್ಬರು ಹೆರಿಗೆ ನೋವು ತಾಳಲಾರದೆ ತನ್ನ ಹೊಟ್ಟೆಯನ್ನು ತಾನೇ ಚಾಕುವಿನಿಂದ ಕುಯ್ದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಹೆಣ್ಣು ಮಗು ಅಪಾಯದಿಂದ ಪಾರಾಗಿ ಜನ್ಮತಾಳಿದೆ.
ಪತಿ ಆರು ತಿಂಗಳ ಹಿಂದೆ ಸಾವನ್ನಪ್ಪಿದ್ದರು
ಮಹಿಳೆಯನ್ನು ಇಲ್ಲಿನ ನಿವಾಸಿ ನಂಕೈ ಎಂದು ಗುರುತಿಸಲಾಗಿದೆ. ಆಕೆಯ ಪತಿ ಆರು ತಿಂಗಳ ಹಿಂದೆ ಸಾವನ್ನಪ್ಪಿದ್ದರು. ಹೀಗಾಗಿ ಮನೆಯಲ್ಲಿ ಒಂಟಿಯಾಗಿದ್ದರು. ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದನ್ನು ತಾಳಲಾರದೆ ಚಾಕು ತೆಗೆದುಕೊಂದು ಹೊಟ್ಟೆಯನ್ನು ಕತ್ತರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ
ಮಹಿಳೆಯ ಕಿರುಚಾಟ ಕೇಳಿದ ನೆರೆಹೊರೆಯವರು ಧಾವಿಸಿದ್ದಾರೆ. ಈ ವೇಳೆ ಕರಳುಗಳು ಹೊರ ಚಾಚಿರುವುದು ಕಂಡು ಬಂದಿದೆ. ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ತಾಯಿಯ ಸ್ಥಿತಿ ಗಂಭೀರ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯದ್ದಾಗ ಚಾಕುವಿನಿಂದ ಕೊಯ್ದುಕೊಂಡಿರುವುದು ಬೆಳಕಿಗೆ ಬಂದಿದೆ. ಸದ್ಯ ಆಕೆಗೆ ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
